ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
2022 ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿಗೆ ಫ್ರೆಂಚ್ ನ ಬರಹಗಾರ್ತಿ ಅನ್ನಿ ಎರ್ನಾಕ್ಸ್ ಭಾಜನರಾಗಿದ್ದಾರೆ.

ನವದೆಹಲಿ: 2022 ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿಗೆ ಫ್ರೆಂಚ್ ನ ಬರಹಗಾರ್ತಿ ಅನ್ನಿ ಎರ್ನಾಕ್ಸ್ ಭಾಜನರಾಗಿದ್ದಾರೆ.
82 ವರ್ಷದ ಅನ್ನಿ ಎರ್ನಾಕ್ಸ್, 30 ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಮ್ಮ ಬರವಣಿಗೆಯಲ್ಲಿ ಎರ್ನಾಕ್ಸ್ ಲಿಂಗ, ಭಾಷೆ ಮತ್ತು ವರ್ಗಕ್ಕೆ ಸಂಬಂಧಿಸಿದಂತೆ ಬಲವಾದ ಅಸಮಾನತೆಗಳಿಂದ ಗುರುತಿಸಲಾದ ಜೀವನವನ್ನು ಸ್ಥಿರವಾಗಿ ಮತ್ತು ವಿವಿಧ ಕೋನಗಳಿಂದ ಶೋಧಿಸುತ್ತಾರೆ ಎಂದು ನೊಬೆಲ್ ಸಮಿತಿ ಹೇಳಿದೆ.
ಸ್ವೀಡಿಷ್ ಅಕಾಡೆಮಿಯ ಖಾಯಂ ಕಾರ್ಯದರ್ಶಿ ಮ್ಯಾಟ್ಸ್ ಮಾಲ್ಮ್ ನೊಬೆಲ್ ಸಾಹಿತ್ಯ ವಿಭಾಗದ ವಿಜೇತರನ್ನು ಅ.06 ರಂದು ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ಘೋಷಿಸಿದರು.
ಎರ್ನಾಕ್ಸ್ ತಮ್ಮ ಬರವಣಿಗೆ ಮೂಲಕ ಸಾಮಾಜಿಕ ಅಸಮಾನತೆಯ ಬಗ್ಗೆ ನಮ್ಮ ಕಣ್ಣುಗಳನ್ನು ತೆರೆಸುತ್ತಾರೆ ಎಂದು ನೋಬೆಲ್ ಸಮಿತಿ ಪ್ರಶಂಸೆ ವ್ಯಕ್ತಪಡಿಸಿದೆ. ಸ್ವೀಡಿಷ್ ಅಕಾಡೆಮಿಯಿಂದ ನೀಡಲಾಗುವ ಈ ಪ್ರಶಸ್ತಿ 10 ಮಿಲಿಯನ್ ಸ್ವೀಡಿಷ್ ಕ್ರೌನ್ಸ್ ($914,704) ಮೌಲ್ಯ ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


