ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯ ವಿರೂಪ; 'ದ್ವೇಷ ಪ್ರೇರಿತ ಘಟನೆ' ಎಂದ ಪೊಲೀಸರು
ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದು, ಒಂಟಾರಿಯೊ ಪ್ರಾಂತ್ಯದ ಪ್ರಮುಖ ಹಿಂದೂ ದೇವಾಲಯದ ಮೇಲೆ "ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಬರಹಗಳನ್ನು ಗೀಚುವ ಮೂಲಕ...

ಟೊರೊಂಟೊ: ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದು, ಒಂಟಾರಿಯೊ ಪ್ರಾಂತ್ಯದ ಪ್ರಮುಖ ಹಿಂದೂ ದೇವಾಲಯದ ಮೇಲೆ "ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಬರಹಗಳನ್ನು ಗೀಚುವ ಮೂಲಕ ವಿರೂಪಗೊಳಿಸಿದ್ದಾರೆ". ಇದು "ದ್ವೇಷ-ಪ್ರೇರಿತ ಘಟನೆ" ಎಂದು ಪೊಲೀಸರು ಹೇಳಿದ್ದಾರೆ.
ಒಂಟಾರಿಯೊದ ವಿಂಡ್ಸರ್ ಸಿಟಿಯ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ ಮತ್ತು ಇಬ್ಬರು ಶಂಕಿತರನ್ನು ಹುಡುಕುತ್ತಿರುವುದಾಗಿ ಬುಧವಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆನಡಾದ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.
"ವಿಂಡ್ಸರ್‌ನ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆಯಲಾಗಿದೆ. ಈ ಘಟನೆಯನ್ನು ಕೆನಡಾದ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ವಿಧ್ವಂಸಕ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ" ಎಂದು ಹೈಕಮಿಷನ್ ಟ್ವೀಟ್ ಮಾಡಿದೆ.
ಸ್ವಾಮಿನಾರಾಯಣ ದೇವಸ್ಥಾನದ ಗೋಡೆಯ ಮೇಲೆ ಕಪ್ಪು ಮಸಿಯಿಂದ ಹಿಂದೂಸ್ಥಾನ್ ಮುರ್ದಾಬಾದ್ ಎಂದ ಬರೆದಿರುವುದು ಬೆಳಕಿಗೆ ಬಂದಿದೆ. ಸ್ವಾಮಿನಾರಾಯಣ ದೇವಸ್ಥಾನದ ಮೇಲೆ ನಡೆದ ಮೂರನೇ ದಾಳಿ ಇದಾಗಿದೆ.
ಕೆನಡಾದ ಹಿಂದೂ ದೇವಾಲಯಗಳಲ್ಲಿ ಇಂತಹ ಘಟನೆಗಳು ಈ ಹಿಂದೆ ಹಲವು ಬಾರಿ ನಡೆದಿವೆ. ಕಳೆದ ಫೆಬ್ರವರಿ 14 ರಂದು ಮಿಸ್ಸಿಸೌಗಾದ ರಾಮ ಮಂದಿರದಲ್ಲಿ ವಿಧ್ವಂಸಕ ಕೃತ್ಯಗಳ ಜೊತೆಗೆ ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಅದೇ ಸಮಯದಲ್ಲಿ, ಕೆನಡಾದ ಬ್ರಾಂಪ್ಟನ್‌ನ ಗೌರಿ ಶಂಕರ ದೇವಾಲಯ ಮತ್ತು ರಿಚ್‌ಮಂಡ್‌ನ ವಿಷ್ಣು ದೇವಾಲಯದಲ್ಲೂ ಅನೇಕ ವಿಗ್ರಹಗಳನ್ನು ಧ್ವಂಸ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


