ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ; ಮಕ್ಕಳು ಸೇರಿ 100 ಮಂದಿ ದಾರುಣ ಸಾವು
ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮ್ಯಾನ್ಮಾರ್‌ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.

ಬ್ಯಾಂಕಾಕ್: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್‌ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


