ರಾಜಕೀಯ ರ್ಯಾಲಿ ವೇಳೆ ಈಕ್ವೆಡಾರ್ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಗುಂಡಿಕ್ಕಿ ಹತ್ಯೆ
ಕ್ಷಿಣ ಅಮೆರಿಕಾದ ಪಶ್ಚಿಮ ತೀರದಲ್ಲಿರುವ ಈಕ್ವೆಡಾರ್ ದೇಶದ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಅವರನ್ನು ನಿನ್ನೆ ಬುಧವಾರ ದೇಶದ ರಾಜಧಾನಿ ಕ್ವಿಟೊದಲ್ಲಿ ರಾಜಕೀಯ ರ್ಯಾಲಿಯೊಂದರಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಹೇಳಿದ್ದಾರೆ.

ಕ್ವಿಟೊ: ದಕ್ಷಿಣ ಅಮೆರಿಕಾದ ಪಶ್ಚಿಮ ತೀರದಲ್ಲಿರುವ ಈಕ್ವೆಡಾರ್ ದೇಶದ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಅವರನ್ನು ನಿನ್ನೆ ಬುಧವಾರ ದೇಶದ ರಾಜಧಾನಿ ಕ್ವಿಟೊದಲ್ಲಿ ರಾಜಕೀಯ ರ್ಯಾಲಿಯೊಂದರಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಹೇಳಿದ್ದಾರೆ.
ಪ್ರಚಾರದ ವೇಳೆ ಗುಂಡಿನ ಸದ್ದು ಕೇಳುತ್ತಿದ್ದಂತೆ ಜನರು ಕಿರುಚುತ್ತಾ ಭೀತಿಯಿಂದ ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ನೋಡುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರ ಸ್ಮರಣೆ ಮತ್ತು ಅವರ ಹೋರಾಟಕ್ಕಾಗಿ, ಈ ಅಪರಾಧಕ್ಕೆ ಶಿಕ್ಷಿಸದೆ ಉಳಿಯುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.
59 ವರ್ಷದ ವಿಲ್ಲಾವಿಸೆನ್ಸಿಯೊ ಅವರು ಬಿಲ್ಡ್ ಈಕ್ವೆಡಾರ್ ಚಳವಳಿಯ ಅಭ್ಯರ್ಥಿಯಾಗಿದ್ದರು. ಅವರು ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ದೇಶದ ಅಧ್ಯಕ್ಷೀಯ ಚುನಾವಣೆಯ 8 ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.
ಈ ಮಧ್ಯೆ, ಮತ್ತೊಬ್ಬ ಅಧ್ಯಕ್ಷೀಯ ಅಭ್ಯರ್ಥಿ ಲೂಯಿಸಾ ಗೊನ್ಜಾಲೆಸ್, ಇದು ನಮಗೆಲ್ಲ ದುಃಖವನ್ನುಂಟುಮಾಡುತ್ತದೆ, ಅವರ ಕುಟುಂಬಕ್ಕೆ ಸಂತಾಪಗಳು. ಮತ್ತೊಬ್ಬ ಅಭ್ಯರ್ಥಿ ಡೇನಿಯಲ್ ನೊಬೊ ಅಜಿನ್ ಪ್ರತಿಕ್ರಿಯಿಸಿ, ಇದು ದೇಶ, ಪ್ರಜಾಪ್ರಭುತ್ವ ಮತ್ತು ಎಲ್ಲಾ ಈಕ್ವೆಡಾರಿಯನ್ನರ ಶಾಂತಿಯ ವಿರುದ್ಧದ ದಾಳಿಯಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


