ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಡೊನಾಲ್ಡ್ ಟ್ರಂಪ್ ಅನರ್ಹ: ಕೊಲೊರಾಡೊ ಕೋರ್ಟ್ ಮಹತ್ವದ ತೀರ್ಪು
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಮತ್ತೊಂದು ಹಿನ್ನಡೆಯುಂಟಾಗಿದ್ದು, ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಡೊನಾಲ್ಡ್ ಟ್ರಂಪ್ ಅನರ್ಹ ಎಂದು ಕೊಲೊರಾಡೊ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಮತ್ತೊಂದು ಹಿನ್ನಡೆಯುಂಟಾಗಿದ್ದು, ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಡೊನಾಲ್ಡ್ ಟ್ರಂಪ್ ಅನರ್ಹ ಎಂದು ಕೊಲೊರಾಡೊ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಕ್ಯಾಪಿಟೋಲ್ (ಸಂಸತ್ತು) ಕಟ್ಟಡದ ಮೇಲೆ 2021ರಲ್ಲಿ ನಡೆಸಿದ ದಾಳಿ ಪ್ರಕರಣದಲ್ಲಿ ಟ್ರಂಪ್ ವಹಿಸಿದ್ದ ಪಾತ್ರದ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ, ಕೊಲೊರಡೊ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಅಮೆರಿಕದ ಸಂವಿಧಾನದ ತೀರಾ ಅಪರೂಪಕ್ಕೆ ಬಳಸಲಾಗುವ ನಿಬಂಧನೆಯಡಿ ಅನರ್ಹಗೊಂಡ ಮೊದಲ ಅಧ್ಯಕ್ಷೀಯ ಅಭ್ಯರ್ಥಿ ಎಂಬ ಕುಖ್ಯಾತಿಗೆ ಟ್ರಂಪ್ ಪಾತ್ರರಾಗಿದ್ದಾರೆ.
ಈ ನಿಬಂಧನೆಯಡಿ ದಂಗೆ ಅಥವಾ ಬಂಡಾಯ ನಡೆಸುವಲ್ಲಿ ಶಾಮೀಲಾದ ವ್ಯಕ್ತಿಗಳು ದೇಶದ ಅತ್ಯುನ್ನತ ಹುದ್ದೆ ಅಲಂಕರಿಸುವುದನ್ನು ತಡೆಯಲಾಗುತ್ತದೆ. ಅಮೆರಿಕ ಸರ್ಕಾರದ ವಿರುದ್ಧ ಹಿಂಸೆಯನ್ನು ಪ್ರಚೋದಿಸಿದ ಕಾರಣಕ್ಕಾಗಿ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಉಮೇದುವಾರಿಕೆಯ ಮುಂಚೂಣಿಯಲ್ಲಿದ್ದ ಟ್ರಂಪ್ ಅವರನ್ನು ಅಮೆರಿಕದ ಸಂವಿಧಾನ ನಿಷೇಧಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಸದ್ಯಕ್ಕೆ ಈ ತೀರ್ಪು, ದೇಶದಲ್ಲಿ ಮಾರ್ಚ್ 5ರಂದು ನಡೆಯುವ ರಿಪಬ್ಲಿಕನ್ ಪ್ರಾಥಮಿಕ ಚುನಾವಣೆಗೆ ಮಾತ್ರ ಪರಿಣಾಮ ಬೀರದೆ, ನವೆಂಬರ್ 6ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಮೇಲೂ ಪರಿಣಾಮ ಬೀರುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


