ಕೆನಡಾ ಬಳಿಕ ಅಮೆರಿಕಾದಲ್ಲೂ ಹಿಂದೂ ದೇವಾಲಯ ಧ್ವಂಸ: ಭಾರತ ವಿರೋಧಿ ಘೋಷಣೆ ಬರೆದ ಖಲಿಸ್ತಾನಿಗಳು
ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ.

ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ.
ಹಿಂದೂ ಅಮೇರಿಕನ್ ಫೌಂಡೇಶನ್, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ಖಲಿಸ್ತಾನ್ ಪರ ಘೋಷಣೆಗಳಿಂದ ವಿರೂಪಗೊಳಿಸಲಾಗಿದೆ.
ಘಟನೆ ಕುರಿತು ಪ್ರಕಿತ್ರಿಯೆ ನೀಡಿರುವ ಅಮೆರಿಕಾ, ಇದು ದ್ವೇಷದ ಅಪರಾಧ ಎಂದು ಪರಿಗಣಿಸಲಾಗಿದ್ದು, ಸಂಪೂರ್ಣ ತನಿಖೆ ನಡೆಸುವ ಭರವಸೆ ನೀಡಿದೆ.
ಈ ಹಿಂದೆ ಜನವರಿ 31 ರಂದು, ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯವನ್ನು ಭಾರತ ವಿರೋಧಿ ಗೀಚುಬರಹದೊಂದಿಗೆ ಧ್ವಂಸಗೊಳಿಸಲಾಗಿತ್ತು. ಈ ಕೃತ್ಯಕ್ಕೆ ಭಾರತೀಯ ಸಮುದಾಯದಿಂದ ತೀವ್ ಆಕ್ರೋಶಗಳು ವ್ಯಕ್ತವಾಗಿತ್ತು.
ಈ ವರ್ಷದ ಏಪ್ರಿಲ್‌ನಲ್ಲಿ, ಕೆನಡಾದ ಒಂಟಾರಿಯೊದಲ್ಲಿರುವ ಮತ್ತೊಂದು ಹಿಂದೂ ದೇವಾಲಯದಲ್ಲಿ ಭಾರತ ವಿರೋಧಿ ಬರಹವನ್ನು ಹಾಕಲಾಗಿತ್ತು. ಇದೀಗ ಅಮೆರಿಕಾದಲ್ಲೂ ಇಂತಹದ್ದೇ ಕೃತ್ಯ ನಡೆದಿದ್ದು, ಇಂದು ಭಾರತೀಯರ ಕಣ್ಣು ಕೆಂಪಗಾಗುವಂತೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


