ಟರ್ಕಿ-ಸಿರಿಯಾ ಭೂಕಂಪ: 17 ಗಂಟೆಗಳ ಕಾಲ ಅವಶೇಷದ ಕೆಳಗೆ ಸಿಲುಕಿದ ತಮ್ಮನನ್ನು ಕಾಪಾಡಿದ ಏಳು ವರ್ಷದ ಬಾಲಕಿ! ಮನಕಲಕುವ ವಿಡಿಯೋ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ಅವಶೇಷಗಳ ಕೆಳಗೆ ಸಿಲುಕಿರುವ ಏಳು ವರ್ಷದ ಬಾಲಕಿ ತನ್ನ ಪುಟ್ಟ ತಮ್ಮನ ತಲೆಯನ್ನು ರಕ್ಷಿಸುತ್ತಿರುವ ಪೋಟೋ ಮನಸ್ಸು ಕರಗಿಸುವಂತಿದೆ.

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ಅವಶೇಷಗಳ ಕೆಳಗೆ ಸಿಲುಕಿರುವ ಏಳು ವರ್ಷದ ಬಾಲಕಿ ತನ್ನ ಪುಟ್ಟ ತಮ್ಮನ ತಲೆಯನ್ನು ರಕ್ಷಿಸುತ್ತಿರುವ ಪೋಟೋ ಮನಸ್ಸು ಕರಗಿಸುವಂತಿದೆ.
ಟ್ವಿಟರ್‌ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ವಿಶ್ವಸಂಸ್ಥೆ ಪ್ರತಿನಿಧಿ ಮೊಹಮದ್ ಸಫಾ, ಇಬ್ಬರೂ 17 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿದ್ದು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಫೋಟೊ, ನೆಟ್ಟಿಗರ ಮನಸ್ಸನ್ನು ಕರಗಿಸಿದ್ದು ಸಂಕಟದ ಪರಿಸ್ಥಿತಿಯಲ್ಲೂ ಆಕೆಗಿರುವ ತಮ್ಮನ ಬಗೆಗಿನ ಕಾಳಜಿಗಾಗಿ ಆ ಬಾಲಕಿಯನ್ನು ಅನೇಕರು ಹೊಗಳಿದ್ದಾರೆ.
ಏಳು ವರ್ಷದ ಬಾಲಕಿ ತನ್ನ ಕಿರಿಯ ಸಹೋದರನ ತಲೆಯನ್ನು ಮುಚ್ಚಿ ಇಟ್ಟುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಇಲ್ಲಿ ಇಬ್ಬರೂ ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಅವಶೇಷಗಳಡಿ ಸಿಲುಕಿರುವ ಈ ಮಕ್ಕಳು ರಕ್ಷಣಾ ತಂಡದ ಗಮನಕ್ಕೆ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


