ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತರ ಸಂಖ್ಯೆ 19,300ಕ್ಕೂ ಹೆಚ್ಚು ಏರಿಕೆ!
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕುಸಿದ ಮನೆಗಳ ಅವಶೇಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸಾವಿನ ಸಂಖ್ಯೆ 19,300ಕ್ಕೆ ಏರಿದೆ.

ಇಸ್ತಾನ್‌ಬುಲ್: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕುಸಿದ ಮನೆಗಳ ಅವಶೇಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸಾವಿನ ಸಂಖ್ಯೆ 19,300ಕ್ಕೆ ಏರಿದೆ.
ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಗಳು ಸಂಭವಿಸಿದ ಮೂರು ದಿನಗಳ ನಂತರ ಲಕ್ಷಾಂತರ ಜನರು ನಿರಾಶ್ರಿತರಾಗಿ ಶಿಬಿರಗಳಲ್ಲಿ ಆಶ್ರಯಪಡೆಯುತ್ತಿದ್ದಾರೆ. ಇನ್ನು ಕೊರೆಯುವ ಚಳಿಯಲ್ಲಿ ಆಹಾರ ಮತ್ತು ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇನ್ನು ಕಟ್ಟಡದ ಅವಶೇಷಗಳ ಅಡಿಯಿಂದ ನೂರಾರು ಮಂದಿ ಬದುಕಿ ಬರುತ್ತಿರುವುದು ನಿಜಕ್ಕೂ ವಿಸ್ಮಯ ಮೂಡಿಸಿದ್ದರು.
ಅಂತಕ್ಯಾ ನಗರದಲ್ಲಿ ರಾತ್ರಿಯಿಡೀ ರಕ್ಷಣಾ ಕಾರ್ಯ ನಡೆಸುತ್ತಿರುವ ತುರ್ತು ರಕ್ಷಣಾ ಸಿಬ್ಬಂದಿ ಹಜಾಲ್ ಗುನರ್ ಎಂಬ ಹುಡುಗಿಯನ್ನು ಕಟ್ಟಡದ ಅವಶೇಷಗಳಿಂದ ರಕ್ಷಿಸಿದ್ದಾರೆ.
ಟರ್ಕಿ ಮತ್ತು ಸಿರಿಯಾದಲ್ಲಿ ಸಾವಿನ ಸಂಖ್ಯೆ 19,300 ದಾಟಿದ್ದು 80,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 110,000ಕ್ಕೂ ಹೆಚ್ಚು ರಕ್ಷಣಾ ಕಾರ್ಯಕರ್ತರು ಈಗ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಟರ್ಕಿಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಟರ್ಕಿ ಸರ್ಕಾರವು ದೇಶಾದ್ಯಂತ 3 ತಿಂಗಳ ಕಾಲ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ದೇಶವ್ಯಾಪಿ 7 ದಿನಗಳ ಕಾಲ ಶೋಕಾಚರಣೆಗೆ ನಿರ್ಧಾರ ಮಾಡಲಾಗಿದೆ. ಭೂಕಂಪದಲ್ಲಿ ಮಡಿದವರ ಗೌರವಾರ್ಥ ಸರ್ಕಾರ ಶೋಕಾಚರಣೆಗೆ ಕರೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


