ಟರ್ಕಿ: ಅವಶೇಷಗಳಡಿ ಸಿಲುಕಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಿದ ಎನ್ ಡಿಆರ್ ಎಫ್
ಭೂಕಂಪ ಪೀಡಿತ ಟರ್ಕಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)ಯ ತಂಡ ಶುಕ್ರವಾರ ಗಾಜಿಯಾಂಟೆಪ್‌ನಲ್ಲಿ ಅವಶೇಷಗಳಡಿ ಸಿಲುಕಿದ್ದ 8 ವರ್ಷದ...

ಗಾಜಿಯಾಂಟೆಪ್: ಭೂಕಂಪ ಪೀಡಿತ ಟರ್ಕಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)ಯ ತಂಡ ಶುಕ್ರವಾರ ಗಾಜಿಯಾಂಟೆಪ್‌ನಲ್ಲಿ ಅವಶೇಷಗಳಡಿ ಸಿಲುಕಿದ್ದ 8 ವರ್ಷದ ಬಾಲಕಿಯನ್ನು ಯಶಸ್ವಿಯಾಗಿ ರಕ್ಷಿಸಿದೆ.
ಕುಸಿದ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 8 ವರ್ಷದ ಬಾಲಕಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಅಧಿಕೃತ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.
ಟರ್ಕಿ ಸೇನೆಯ ಸಿಬ್ಬಂದಿಯೊಂದಿಗೆ ಗಾಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ಪಟ್ಟಣದಲ್ಲಿ ಇಂದು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಎನ್‌ಡಿಆರ್‌ಎಫ್ ವಕ್ತಾರರು ಹೇಳಿದ್ದಾರೆ.
ಎನ್‌ಡಿಆರ್‌ಎಫ್ ಸಿಬ್ಬಂದಿ ಗುರುವಾರ ಅದೇ ಪ್ರದೇಶದಲ್ಲಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ್ದರು.
"ಎನ್ ಡಿಆರ್ ಎಫ್ ತಂಡ ಎರಡು ಜೀವಗಳನ್ನು ಉಳಿಸಿದೆ ಮತ್ತು ಇದುವರೆಗೆ 13 ಶವಗಳನ್ನು ಅವಶೇಷಗಳಿಂದ ಹೊರತೆಗೆದಿದೆ. ಟರ್ಕಿಯ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ" ಎಂದು ವಕ್ತಾರರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಾಗಿ ಎನ್ ಡಿಆರ್ ಎಫ್ ಮೂರು ತಂಡಗಳನ್ನು ಟರ್ಕಿಗೆ ಕಳುಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


