ಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಲಿದೆ - ವಿಶ್ವಸಂಸ್ಥೆ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ...

ಕಹ್ರಾಮನ್ಮರಸ್: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ ಮಾನವೀಯ ನೆರವು ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಅವರು ಹೇಳಿದ್ದಾರೆ.
ಪರಿಸ್ಥಿತಿ ಪರಿಶೀಲಿಸಲು ಶನಿವಾರ ಟರ್ಕಿಯ ದಕ್ಷಿಣ ನಗರವಾದ ಕಹ್ರಾಮನ್‌ಮರಸ್‌ಗೆ ಆಗಮಿಸಿರುವ ಗ್ರಿಫಿತ್ಸ್ ಅವರು, ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
"ನಾವು ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ನಿಖರವಾಗಿ ಅಂದಾಜು ಮಾಡುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಆದರೆ ಖಂಡಿತವಾಗಿಯೂ ಸಾವಿನ ಸಂಖ್ಯೆ ದ್ವಿಗುಣ ಅಥವಾ ಅದಕ್ಕಿಂತ ಹೆಚ್ಚಾಗಲಿದೆ ಎಂದು" ಗ್ರಿಫಿತ್ಸ್ ಅವರು ಶನಿವಾರ ಸ್ಕೈ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
"ನಾವು ನಿಜವಾಗಿಯೂ ಸತ್ತವರ ಸಂಖ್ಯೆಯನ್ನು ನಿಖರವಾಗಿ ಎಣಿಸಲು ಪ್ರಾರಂಭಿಸಿಲ್ಲ" ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಬದುಕು ಕಸಿದ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆ, ಲಕ್ಷಾಂತರ ಮಂದಿ ನಿರಾಶ್ರಿತ!
ಶೀಘ್ರದಲ್ಲೇ, ರಕ್ಷಣಾ ಸಿಬ್ಬಂದಿಗಳು ಮಾನವೀಯ ನೆರವು ಏಜೆನ್ಸಿಗಳಿಗೆ ದಾರಿ ಮಾಡಿಕೊಡುತ್ತಾರೆ. ಮುಂದಿನ ತಿಂಗಳುಗಳಲ್ಲಿ ಭೂಕಂಪ ಪೀಡಿತರನ್ನು ನೋಡಿಕೊಳ್ಳುವುದು ಅವರ ಕೆಲಸವಾಗಲಿದೆ." ಎಂದು ಅವರು ಹೇಳಿದ್ದಾರೆ.
ಭೂಕಂಪದಿಂದಾಗಿ, ಟರ್ಕಿ ಮತ್ತು ಸಿರಿಯಾ ಸೇರಿದತೆ 2.6 ಕೋಟಿ ಜನರು ತೊಂದರೆಗೀಡಾಗಿದ್ದು, ತಾತ್ಕಾಲಿಕ ಟೆಂಟ್‌ಗಳನ್ನು ನಿರ್ಮಿಸಿ ಜನರನ್ನು ಸ್ಥಳಾಂತರಿಸಲಾಗುತ್ತಿದೆ.
ಟರ್ಕಿಯಲ್ಲಿ ಇದುವರೆಗೆ 24,617 ಮತ್ತು ಸಿರಿಯಾದಲ್ಲಿ 3,574 ಜನರು ಸಾವನ್ನಪ್ಪಿದ್ದಾರೆ. ಎರಡೂ ದೇಶಗಳಲ್ಲಿ ಒಟ್ಟು 28,191 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮತ್ತು ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


