ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲ ಉಕ್ರೇನ್‌ಗೆ ಧನಾತ್ಮಕವಾಗಿರುತ್ತದೆ: ವೊಲೊಡಿಮಿರ್ ಝೆಲೆನ್‌ಸ್ಕಿ
ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸಿಯೋಲ್: ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ಸೆಕ್ರೆಟರಿ ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಅವರು ಯುದ್ಧ ಪೀಡಿತ ದೇಶಕ್ಕೆ ಮಿಲಿಟರಿ ನೆರವು ನೀಡುವಂತೆ ದಕ್ಷಿಣ ಕೊರಿಯಾಗೆ ಮಾಡಿದ ಕರೆಗೆ ಪ್ರತಿಕ್ರಿಯೆಯಾಗಿ, ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಕೀವ್‌ನಲ್ಲಿ ಮಾಡಿದ ಭಾಷಣದಲ್ಲಿ ಝೆಲೆನ್‌ಸ್ಕಿ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸುದ್ದಿ ವರದಿಯೊಂದು ತಿಳಿಸಿದೆ.
'ನಮಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದರೆ ನಾವು ಸಕಾರಾತ್ಮಕವಾಗಿ ಕಾಣುತ್ತೇವೆ. ಈ ಸಂದರ್ಭದಲ್ಲಿ ಉಕ್ರೇನ್‌ಗೆ ಸಹಾಯ ಮಾಡಲು ಕೊಲಿಯಾ ಯಾವುದಾದರೊಂದು ಅವಕಾಶವನ್ನು ಕಂಡುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಎಂದು ಝೆಲೆನ್‌ಸ್ಕಿ ತಿಳಿಸಿದ್ದಾರೆ.
ಈ ವಿಚಾರವಾಗಿ ದಕ್ಷಿಣ ಕೊರಿಯಾದ ಬಗ್ಗೆ ಇತರ ದೇಶಗಳೊಂದಿಗೆ 'ವಿವರಗಳನ್ನು ಚರ್ಚಿಸಲಾಗುತ್ತಿದೆ'. ದಕ್ಷಿಣ ಕೊರಿಯಾದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು 'ಬಹಳ ಮುಖ್ಯ' ಮತ್ತು ಮತ್ತಷ್ಟು ಅಭಿವೃದ್ಧಿ ಹೊಂದಬೇಕು ಎಂದು ಹೇಳಿದ್ದಾಗಿ ಯೋನ್ಹಾಪ್ (Yonhap) ನ್ಯೂಸ್ ಏಜೆನ್ಸಿ ಯುಕ್ರಿನ್ಫಾರ್ಮ್ (Ukrinform) ಅನ್ನು ಉಲ್ಲೇಖಿಸಿ ವರದಿ ಮಾಡಿದೆ.
ಸ್ಟೋಲ್ಟೆನ್‌ಬರ್ಗ್ ಜನವರಿ ಅಂತ್ಯದಲ್ಲಿ ಸಿಯೋಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ವೇದಿಕೆಯೊಂದರಲ್ಲಿ ದಕ್ಷಿಣ ಕೊರಿಯಾ 'ಮಿಲಿಟರಿ ಬೆಂಬಲದ ನಿರ್ದಿಷ್ಟ ವಿಷಯದ ಮೇಲೆ ಗಮನ ಹರಿಸಬೇಕು' ಎಂದು ಹೇಳಿದ್ದರು.
ದಕ್ಷಿಣ ಕೊರಿಯಾ ಉಕ್ರೇನ್‌ಗೆ ಮಾನವೀಯ ನೆರವು ಮತ್ತು ಇತರ ಮಿಲಿಟರಿಯೇತರ ಬೆಂಬಲವನ್ನು ಮಾತ್ರ ನೀಡಿದೆ. ಸಂಘರ್ಷದಲ್ಲಿ ತೊಡಗಿರುವ ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವುದಿಲ್ಲ ಎಂಬ ತನ್ನ ನಿಲುವನ್ನು ಉಲ್ಲೇಖಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


