ಉಕ್ರೇನ್ ಅಪಾರ್ಟ್'ಮೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 12 ಮಂದಿ ಸಾವು
ಉಕ್ರೇನ್ ಮೇಲಿನ ತನ್ನ ದಾಳಿಯನ್ನು ರಷ್ಯಾ ಮುಂದುವರೆಸಿದ್ದು, ಶನಿವಾರ ರಾತ್ರಿ ಉಕ್ರೇನ್'ನ ಡಿನಿಪ್ರೊ ನಗರದ ವಸತಿ ಸಮುಚ್ಚಯವೊಂದರ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

ಕೀವ್: ಉಕ್ರೇನ್ ಮೇಲಿನ ತನ್ನ ದಾಳಿಯನ್ನು ರಷ್ಯಾ ಮುಂದುವರೆಸಿದ್ದು, ಶನಿವಾರ ರಾತ್ರಿ ಉಕ್ರೇನ್'ನ ಡಿನಿಪ್ರೊ ನಗರದ ವಸತಿ ಸಮುಚ್ಚಯವೊಂದರ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.
ಒಂಬತ್ತು ಅಂತಸ್ತಿನ ಡಿನಿಪ್ರೊ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ದಾಳಿಯಿಂದ ಇಂಧನ ಸೌಲಭ್ಯ ಘಟಕಗಳಿಗೂ ಹಾನಿಯಾಗಿದ್ದು, ಇದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿ ತಿಳಿಸಿದೆ.
ದಾಳಿಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ 6 ಮಕ್ಕಳು ಸೇರಿವೆ ಎಂದು ಸ್ಥಳೀಯ ಗವರ್ನರ್ ವಾಲೆಂಟೈನ್ ರೆಝ್ನಿಚೆಂಕೊ ಹೇಳಿದ್ದಾರೆ.
ನಿಪ್ರೊವ್‌ಸ್ಕೀ, ಹೊಲೊಸೀವ್‌ಸ್ಕೀ, ಡಿನಿಪ್ರೊ ಪ್ರದೇಶಗಳ ಮೇಲೆ ರಷ್ಯಾ ವಾಯು ದಾಳಿಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಜನರು ಆಶ್ರಯ ತಾಣಗಳಲ್ಲಿ ಉಳಿಯುವಂತೆ ನಗರದ ನಿವಾಸಿಗಳಿಗೆ ಕೀವ್ ಮೇಯರ್ ವಿತಾಲಿ ಕ್ಲಿಸ್‌ಚ್ಕೊ ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಬಹುದು ಎಂದು ಉಕ್ರೇನ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


