ಇರಾನ್ ನಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ
ವಾಯುವ್ಯ ಇರಾನ್ನಲ್ಲಿ ಕಳೆದ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ (Earthquake) 7 ಜನ ಮೃತಪಟ್ಟಿದ್ದಾರೆ. 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಟೆಹ್ರಾನ್(ಇರಾನ್): ವಾಯುವ್ಯ ಇರಾನ್ನಲ್ಲಿ ಕಳೆದ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ (Earthquake) 7 ಜನ ಮೃತಪಟ್ಟಿದ್ದಾರೆ. 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುದ್ದಿ ಮೂಲಗಳ ಪ್ರಕಾರ 5.9 ರಷ್ಟು ತೀರ್ವತೆಯಲ್ಲಿ ಭೂಕಂಪನ ಸಂಭವಿಸಿದೆ. ಮತ್ತು ಭೂಕಂಪನವು ಇರಾನ ಮತ್ತು ಟರ್ಕಿ ಗಡಿ ಅಂಚಿನಲ್ಲಿರುವ ಖೋಯ ನಗರ ಸಮೀಪಿಸಿದೆ.
ಇರಾನ್‌ನ ಪಶ್ಚಿಮ ಅಜೆರ್‌ಬೈಜಾನ್ ಪ್ರಾಂತ್ಯದ ಪ್ರದೇಶಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಇರಾನ್ ತುರ್ತು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪೀಡಿತ ಪ್ರದೇಶಗಳಲ್ಲಿ ಹಿಮಪಾತವಾಗುತ್ತಿದೆ, ಘನೀಕರಿಸುವ ತಾಪಮಾನ ಮತ್ತು ಕೆಲವು ವಿದ್ಯುತ್ ಕಡಿತ ವರದಿಯಾಗಿದೆ ಎಂದು ತುರ್ತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


