ಸಿರಿಯಾ: ಡ್ರೋನ್ ದಾಳಿಯಲ್ಲಿ ಐಸಿಸ್ ಉಗ್ರ ಸಂಘಟನೆ ಮುಖ್ಯಸ್ಥ ಅಲ್ ಮುಹಾಜಿರ್ ಹತ; ಅಮೆರಿಕ ಹೇಳಿಕೆ
ಸೇನಾಪಡೆಗಳು ನಡೆಸಿದ ಡ್ರೋನ್ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಮುಹಾಜಿರ್ ನನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಹೇಳಿದೆ.

ಡಮಾಸ್ಕಸ್: ಸೇನಾಪಡೆಗಳು ನಡೆಸಿದ ಡ್ರೋನ್ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಮುಹಾಜಿರ್ ನನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಹೇಳಿದೆ.
ಪೂರ್ವ ಭಾಗದ ಸಿರಿಯಾದಲ್ಲಿ ಅಮೆರಿಕ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ ಐಸಿಸ್ ಉಗ್ರ ಅಲ್ ಮುಹಾಜಿರ್ ನನ್ನು ಹತ್ಯೆ ಮಾಡಲಾಗಿದ್ದು, ಕಳೆದ ಜುಲೈ 7 ರಂದು ಗುಪ್ತ ಕಾರ್ಯಾಚರಣೆಯಲ್ಲಿ ಡ್ರೋನ್ ದಾಳಿಯಲ್ಲಿ ಕುಖ್ಯಾತ ಉಗ್ರ ಹತನಾಗಿದ್ದಾನೆ. ಈ ದಾಳಿಯಲ್ಲಿ ಬೇರೆ ಯಾವುದೇ ನಾಗರಿಕರು ಗಾಯಗೊಂಡಿರುವ ಕುರಿತು ಮಾಹಿತಿ ಇಲ್ಲ ಎಂದು ಅಮೆರಿಕ ಸೆಂಟ್ರಲ್ ಕಮಾಂಡ್ ತಿಳಿಸಿದೆ.
ಜುಲೈ 9, 2023 ರಂದು ಅಮೆರಿಕ ಸೇನಾಪಡೆಯ MQ-9 ರೀಪರ್ ಡ್ರೋನ್ ನಡೆಸಿದ ದಾಳಿಯಲ್ಲಿ ಐಸಿಸ್ ಉಗ್ರ ಅಲ್ ಮುಹಾಜಿರ್ ನನ್ನು ಹತ್ಯೆ ಮಾಡಲಾಗಿದೆ. ಸುಮಾರು ಎರಡು ಗಂಟೆಗಳ ಕಾಲ ಈ ಕಾರ್ಯಾಚರಣೆ ನಡೆದಿದ್ದು, ಈ ದಾಳಿಗೂ ಮುನ್ನ ರಷ್ಯಾದ ಸೇನಾ ವಿಮಾನ ಕೂಡ ಕಾರ್ಯಾಚರಣೆ ನಡೆಸಿ ತನ್ನ ಡ್ರೋನ್ ಗೆ ಅಡ್ಡಿಪಡಿಸಿತ್ತು. ಕಳೆದ 24 ಗಂಟೆಗಳಲ್ಲಿ ರಷ್ಯಾದ ಪೈಲಟ್‌ಗಳು ನಡೆಸಿದ 2ನೇ ಅಪಾಯಕಾರಿ ನಡವಳಿಕೆ ಇದಾಗಿದೆ ಎಂದು ಅಮೆರಿಕ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕ ಕಳೆದ ಒಂದು ವರ್ಷದಿಂದ ಸಿರಿಯಾದಲ್ಲಿ ಶಂಕಿತ ಐಸಿಸ್ ಉಗ್ರರ ವಿರುದ್ಧ ದಾಳಿ ನಡೆಸುತ್ತಿದೆ. ಈಗಾಗಲೇ ಹಲವು ಉಗ್ರ ನಾಯಕರನ್ನು ಕೂಡ ಬಂಧಿಸಿದೆ, ಅವರಲ್ಲಿ ಕೆಲವರು 2019ರಲ್ಲಿ ಸಿರಿಯಾದ ಪ್ರದೇಶವನ್ನು ತೊರೆದು ಟರ್ಕಿ ಬೆಂಬಲಿತ ಬಂಡುಕೋರರ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


