ಫ್ರಾನ್ಸ್ ಪ್ರವಾಸ ಮುಗಿಸಿ ಅಬು ಧಾಬಿಗೆ ಆಗಮಿಸಿದ ಪ್ರಧಾನಿ ಮೋದಿ: ಅಧ್ಯಕ್ಷ ಶೇಖ್ ಮೊಹಮ್ಮದ್ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್(UAE)ಗೆ ಒಂದು ದಿನದ ಭೇಟಿಗಾಗಿ ಇಂದು ಶನಿವಾರ ಆಗಮಿಸಿದರು.

ಅಬು ಧಾಬಿ: ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್(UAE)ಗೆ ಒಂದು ದಿನದ ಭೇಟಿಗಾಗಿ ಇಂದು ಶನಿವಾರ ಆಗಮಿಸಿದರು. ಈ ಸಂದರ್ಭದಲ್ಲಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. ತಮ್ಮ ಭೇಟಿಯ ಸಂದರ್ಭದಲ್ಲಿ ಎರಡು ಕಾರ್ಯತಂತ್ರದ ಪಾಲುದಾರರ ನಡುವೆ ಬೆಳೆಯುತ್ತಿರುವ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಲಿದ್ದಾರೆ.
ಅಧಿಕೃತ ದ್ವಿಪಕ್ಷೀಯ ಭೇಟಿಗಾಗಿ ಯುಎಇಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಬು ಧಾಬಿಯ ರಾಜ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು.
ನನ್ನ ಸ್ನೇಹಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಭಾರತದಿಂದ ಹೊರಡುವ ವೇಳೆ ಹೇಳಿದ್ದರು. ನಮ್ಮ ಎರಡು ದೇಶಗಳು ವ್ಯಾಪಾರ, ಹೂಡಿಕೆ, ಇಂಧನ, ಆಹಾರ ಭದ್ರತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಫಿನ್‌ಟೆಕ್, ರಕ್ಷಣೆ, ಭದ್ರತೆ ಮತ್ತು ದೃಢವಾದ ಜನರ-ಜನರ ನಡುವಿನ ಸಂಬಂಧಗಳಂತಹ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


