ವಿದೇಶ

'ಫೇಸ್ ಬುಕ್' ಸ್ನೇಹಿತನ ಭೇಟಿಗಾಗಿ ಭಾರತದ ವಿವಾಹಿತ ಮಹಿಳೆ ಪಾಕಿಸ್ತಾನಕ್ಕೆ ಪ್ರಯಾಣ!

ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

'ಫೇಸ್ ಬುಕ್' ಸ್ನೇಹಿತನ ಭೇಟಿಗಾಗಿ ಭಾರತದ ವಿವಾಹಿತ ಮಹಿಳೆ ಪಾಕಿಸ್ತಾನಕ್ಕೆ ಪ್ರಯಾಣ!
ಸಾಂದರ್ಭಿಕ ಚಿತ್ರ
Published On :

ಖೈಬರ್ ಪಖ್ತುಂಕಾ: ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ಅಂಜು ತನ್ನ 29 ವರ್ಷದ ಪಾಕಿಸ್ತಾನಿ ಸ್ನೇಹಿತ ನಸ್ರುಲ್ಲಾನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಗೆ ತೆರಳಿದ್ದಾರೆ.  ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸ್ನೇಹಿತರಾಗಿದ್ದರು ಎಂದು ಎಆರ್ ವೈ ನ್ಯೂಸ್ ವರದಿ ಮಾಡಿದೆ.

ಅಂಜು ಆರಂಭದಲ್ಲಿ ಪೊಲೀಸರ ವಶದಲ್ಲಿದ್ದರು ಆದರೆ ಅವರ ಪ್ರಯಾಣ ದಾಖಲೆಗಳನ್ನು ಜಿಲ್ಲಾ ಪೊಲೀಸರು ಪರಿಶೀಲಿಸಿದ ನಂತರ ಬಿಡುಗಡೆ ಮಾಡಿದ್ದಾರೆ. ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಯ ಭೇಟಿಗೆ ಅನುಮತಿ ನೀಡಲಾಗಿದೆ. ದೇಶಕ್ಕೆ ಕೆಟ್ಟ ಹೆಸರು ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅವರಿಗೆ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.

ಮಾಧ್ಯಮ ವರದಿಗಳ ನಂತರ ರಾಜಸ್ಥಾನ ಪೊಲೀಸರ ತಂಡವು ಅಂಜು ಅವರ ಬಗ್ಗೆ ವಿಚಾರಿಸಲು ಭಿವಾಡಿಯ ಮನೆಗೆ ತಲುಪಿದೆ. ಜೈಪುರಕ್ಕೆ ಹೋಗುವ ನೆಪದಲ್ಲಿ ಗುರುವಾರ ಮನೆಯಿಂದ ಹೊರ ಹೋಗಿದ್ದಳು ಆದರೆ ಆಕೆ ಪಾಕಿಸ್ತಾನದಲ್ಲಿದ್ದಾಳೆ ಎಂದು ಮನೆಯವರಿಗೆ ನಂತರ ಗೊತ್ತಾಗಿದೆ ಎಂದು ಆಕೆಯ ಪತಿ ಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಅವಳೊಂದಿಗೆ ವಾಟ್ಸಾಪ್‌ನಲ್ಲಿ ಮಾತನಾಡಿದಾಗ ಆಕೆ ಲಾಹೋರ್ ನಲ್ಲಿ ಇರುವುದಾಗಿ ತಿಳಿಯಿತು ಎಂದುಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ.ಅರವಿಂದ್ ಮತ್ತು ಅಂಜು 2007 ರಲ್ಲಿ ವಿವಾಹವಾಗಿದ್ದು, ಅವರಿಗೆ ಅವರಿಗೆ 15 ವರ್ಷದ ಹುಡುಗಿ ಮತ್ತು ಆರು ವರ್ಷದ ಮಗನಿದ್ದಾರೆ. ಆಕೆ ಸೋಷಿಯಲ್ ಮೀಡಿಯಾದಲ್ಲಿ ಯಾರೊಂದಿಗೂ ಸಂಪರ್ಕದಲ್ಲಿರುತ್ತಾಳೆ ಎಂಬುದೇ ತನಗೆ ತಿಳಿದಿರಲಿಲ್ಲ ಎಂದು ಅರವಿಂದ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.