9 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ
ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಕೊಲೊಂಬೋ: ಸಮುದ್ರದ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೀನುಗಾರರು ಸೋಮವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದರು ಮತ್ತು ನಿನ್ನೆ ತಡರಾತ್ರಿ ಕಚ್ಚತೀವು ಮತ್ತು ನೆಡುಂತೀವು ನಡುವೆ ಬಂಧಿಸಲಾಗಿದೆ ಎರಡು ಯಾಂತ್ರೀಕೃತ ದೋಣಿಗಳನ್ನೂ ವಶಪಡಿಸಿಕೊಳ್ಳಲಾಗಿದೆ ಹೇಳಿದ್ದಾರೆ. ಈ ತಿಂಗಳಿನಲ್ಲಿ ನಡೆದ ಎರಡನೇ ಘಟನೆಯಾಗಿದೆ.
ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 22 ಮೀನುಗಾರರ ಬಂಧನ
ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಸಿಬ್ಬಂದಿ ಜುಲೈ 24 ರ ರಾತ್ರಿ ಶ್ರೀಲಂಕಾದ ಸಮುದ್ರದಿಂದ ಭಾರತೀಯ ಮೀನುಗಾರರನ್ನು ಓಡಿಸಲು ವಿಶೇಷ ಕಾರ್ಯಾಚರಣೆ ನಡೆಸಿದರು" ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.
ವಿದೇಶಿ ಮೀನುಗಾರಿಕಾ ಟ್ರಾಲರ್‌ಗಳ ಅಕ್ರಮ ಮೀನುಗಾರಿಕೆ ತಡೆಯಲು ನೌಕಾಪಡೆಯು ಶ್ರೀಲಂಕಾದ ನೀರಿನಲ್ಲಿ ನಿಯಮಿತ ಗಸ್ತು ತಿರುಗುತ್ತಿದ್ದು ರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.
ಕಳೆದ ವಾರ ಶ್ರೀಲಂಕಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರನಿಲ್ ವಿಕ್ರಮಸಿಂಘೆ ನಡುವಿನ ಮಾತುಕತೆಯ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆ ಕಾಣಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


