ಮಣಿಪುರ ಕ್ರೌರ್ಯಕ್ಕೆ ಅಮೆರಿಕ ಖಂಡನೆ: ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಬೆಂಬಲ ಘೋಷಣೆ
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಅಮೆರಿಕ ಆಘಾತ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಕೈಗೊಳ್ಳುವ ಯಾವುದೇ ನ್ಯಾಯಪರ ಕ್ರಮಗಳಿಗೆ ತಾನು ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.

ವಾಷಿಂಗ್ಟನ್: ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಅಮೆರಿಕ ಆಘಾತ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಕೈಗೊಳ್ಳುವ ಯಾವುದೇ ನ್ಯಾಯಪರ ಕ್ರಮಗಳಿಗೆ ತಾನು ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ದುಷ್ಕರ್ಮಿಗಳ ಗುಂಪು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡುತ್ತಿರುವ ವೀಡಿಯೊ ಜುಲೈ 19 ರಂದು ವೈರಲ್ ಆಗಿ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ದಾಳಿಯ ವಿಡಿಯೋ ವಿಚಾರವಾಗಿ ಇದೀಗ ಅಂತಾರಾಷ್ಟ್ರೀಯ ಸಮುದಾಯ ಕೂಡ ಆಘಾತ ವ್ಯಕ್ತಪಡಿಸಿದ್ದು, ಸಂತ್ರಸ್ಥರಿಗೆ ನ್ಯಾಯವನ್ನು ಹುಡುಕುವ ಸರ್ಕಾರದ ಪ್ರಯತ್ನಗಳನ್ನು ತಾನು ಬೆಂಬಲಿಸುತ್ತೇನೆ ಎಂದು ಬೈಡನ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ವಿದೇಶಾಂಗ ಇಲಾಖೆಯ ಉಪ ವಕ್ತಾರರಾದ ವೇದಾಂತ್ ಪಟೇಲ್, 'ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲಿನ ಈ ತೀವ್ರವಾದ ದಾಳಿಯ ವೀಡಿಯೊದಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಈ ಲಿಂಗ ಆಧಾರಿತ ಹಿಂಸಾಚಾರದಲ್ಲಿ ಬದುಕುಳಿದವರಿಗೆ ನಾವು ನಮ್ಮ ಆಳವಾದ ಸಹಾನುಭೂತಿಗಳನ್ನು ತಿಳಿಸುತ್ತೇವೆ ಮತ್ತು ಅವರಿಗೆ ನ್ಯಾಯವನ್ನು ಹುಡುಕುವ ಭಾರತ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತೇವೆ" ಎಂದು ತಿಳಿಸಿದ್ದಾರೆ.
ಯಾವುದೇ ಸುಸಂಸ್ಕೃತ ಸಮಾಜದಲ್ಲಿ ಮಹಿಳೆಯರ ಮೇಲಿನ ಇಂತಹ ದೌರ್ಜನ್ಯ ನಾಚಿಕೆಗೇಡಿನ ಸಂಗತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಪಟೇಲ್ ಹೇಳಿದ್ದಾರೆ. ಮತ್ತು ನಾವು ಹಿಂದೆ ಹೇಳಿದಂತೆ, ಮಣಿಪುರದಲ್ಲಿ ಹಿಂಸಾಚಾರಕ್ಕೆ ಶಾಂತಿಯುತ ಮತ್ತು ಅಂತರ್ಗತ ಪರಿಹಾರವನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಮಾನವೀಯ ಅಗತ್ಯಗಳಿಗೆ ಪ್ರತಿಕ್ರಿಯಿಸಲು ಮತ್ತು ಎಲ್ಲಾ ಗುಂಪುಗಳ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತೇವೆ" ಎಂದು ಅವರು ಹೇಳಿದರು.
ಮಣಿಪುರದ ಪರಿಸ್ಥಿತಿಯ ಕುರಿತು ಇದು ಅಮೆರಿಕ ಸರ್ಕಾರದ ಮೊದಲ ಪ್ರತಿಕ್ರಿಯೆಯಾಗಿದ್ದು, ಕಳೆದ ವಾರ ಪ್ರಧಾನಿ ಮೋದಿ ಅವರು ಘಟನೆಯ ಬಗ್ಗೆ ನೋವು ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ, ಇದು 140 ಕೋಟಿ ಭಾರತೀಯರನ್ನು ನಾಚಿಕೆಪಡಿಸಿದೆ ಮತ್ತು ತಪ್ಪಿತಸ್ಥರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


