ಜೂನ್ 24ಕ್ಕೆ ಪ್ರಧಾನಿ ಮೋದಿ ಮೊದಲ ಬಾರಿಗೆ ಈಜಿಪ್ಟ್ ಪ್ರವಾಸ
ಪ್ರಧಾನಿ ನರೇಂದ್ರ ಮೋದಿ ಎರಡು ರಾಷ್ಟ್ರಗಳ ವಿದೇಶ ಪ್ರವಾಸ ಸಂದರ್ಭದಲ್ಲಿ ಅಮೆರಿಕ ನಂತರ ಈಜಿಪ್ಟ್ ಗೆ ಭೇಟಿ ನೀಡಲಿದ್ದಾರೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಮೋದಿ ಇದೇ ಮೊದಲ ಬಾರಿಗೆ ಈಜಿಪ್ಟ್ ಗೆ ಭೇಟಿ ನೀಡುತ್ತಿದ್ದು, ಜೂನ್ 24 ರಿಂದ 25ಕ್ಕೆ ಪ್ರಧಾನಿ ಮೋದಿ ಕೈರೋಗೆ ಪ್ರಯಾಣಿಸಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ರಾಷ್ಟ್ರಗಳ ವಿದೇಶ ಪ್ರವಾಸ ಸಂದರ್ಭದಲ್ಲಿ ಅಮೆರಿಕ ನಂತರ ಈಜಿಪ್ಟ್ ಗೆ ಭೇಟಿ ನೀಡಲಿದ್ದಾರೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಮೋದಿ ಇದೇ ಮೊದಲ ಬಾರಿಗೆ ಈಜಿಪ್ಟ್ ಗೆ ಭೇಟಿ ನೀಡುತ್ತಿದ್ದು, ಜೂನ್ 24 ರಿಂದ 25ಕ್ಕೆ ಪ್ರಧಾನಿ ಮೋದಿ ಕೈರೋಗೆ ಪ್ರಯಾಣಿಸಲಿದ್ದಾರೆ.
ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫತ್ತಾಹ್ ಎಲ್ - ಸಿಸಿ ತಮ್ಮ ದೇಶಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು."ಅಧ್ಯಕ್ಷ ಸಿಸಿ ಅವರೊಂದಿಗಿನ ಮಾತುಕತೆ ಹೊರತಾಗಿ ಈಜಿಪ್ಟ್ ಸರ್ಕಾರದ ಹಿರಿಯ ಗಣ್ಯರು, ಕೆಲವು ಪ್ರಮುಖ ವ್ಯಕ್ತಿಗಳು ಮತ್ತು ಈಜಿಪ್ಟ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಮೋದಿ ಸಂವಹನ ನಡೆಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
"ಭಾರತ ಮತ್ತು ಈಜಿಪ್ಟ್ ನಡುವಿನ ಸಂಬಂಧಗಳು ಪ್ರಾಚೀನ ವ್ಯಾಪಾರ, ಆರ್ಥಿಕ ಸಂಪರ್ಕಗಳು ಮತ್ತು ಸಾಂಸ್ಕೃತಿಕಆಳವಾಗಿ ಬೇರೂರಿರುವ ಜನರು-ಜನರ ನಡುವಿನ ಸಂಬಂಧಗಳನ್ನು ಆಧರಿಸಿವೆ" ಎಂದು ಅದು ಹೇಳಿದೆ. ಜನವರಿಯಲ್ಲಿ ಅಧ್ಯಕ್ಷ ಸಿಸಿ ಭಾರತಕ್ಕೆ ರಾಜ್ಯ ಭೇಟಿಯ ಸಂದರ್ಭದಲ್ಲಿ, ಎರಡೂ ದೇಶಗಳ ನಡುವಿನ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲು ಒಪ್ಪಿಗೆ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


