ನೇಪಾಳ: ಭಾರೀ ಮಳೆ, ಭೂಕುಸಿತದಲ್ಲಿ 5 ಮಂದಿ ಸಾವು, 28 ಮಂದಿ ನಾಪತ್ತೆ
ನೆರೆಯ ದೇಶ ಕಠ್ಮಂಡುವಿನ ವಿವಿಧೆಡೆ ಶನಿವಾರ ರಾತ್ರಿಯಿಂದಾಗುತ್ತಿರುವ ಭಾರೀ ಮುಂಗಾರು ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿದ್ದಾರೆ.

ಕಠ್ಮಂಡು: ನೆರೆಯ ದೇಶ ಕಠ್ಮಂಡುವಿನ ವಿವಿಧೆಡೆ ಶನಿವಾರ ರಾತ್ರಿಯಿಂದಾಗುತ್ತಿರುವ ಭಾರೀ ಮುಂಗಾರು ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿದ್ದಾರೆ. ಕೋಶಿ ಪ್ರಾಂತ್ಯದ ಗುಡ್ಡಗಾಡು ಜಿಲ್ಲೆಗಳಾದ ಸಂಖುವಸಭಾ, ಪಂಚತಾರ್ ಮತ್ತು ತಾಪ್ಲೆಜಂಗ್ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯುಂಟಾಗಿದೆ. ಸಂಖುವಾಸಭಾದ ಪಂಚಖಾಪಾನ್ ಪುರಸಭೆ-9 ರ ಸಂತೋಷ್ ರೈ ಅವರು ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಸೂಪರ್ ಹೆವಾ ಜಲವಿದ್ಯುತ್ ಯೋಜನೆ ಪ್ರವಾಹದಿಂದಾಗಿ ಹಾನಿಯಾಗಿದೆ. ಆರು ಮೆಗಾವ್ಯಾಟ್ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುವ 18 ಜನರು ಸಂಪರ್ಕದಲ್ಲಿಲ್ಲ, ಕಾಣೆಯಾದವರ ಹುಡುಕಾಟ ನಡೆಯುತ್ತಿದೆ. ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬೀರೇಂದ್ರ ಗೋದರ್ ತಿಳಿಸಿದ್ದಾರೆ.
ಸಂಖುವಾಸಭಾದಲ್ಲಿ ಪ್ರವಾಹದಿಂದಾಗಿ ಎಂಟು ಮನೆಗಳು ಮತ್ತು ಸೇತುವೆಯೊಂದು ನೀರಿನಲ್ಲಿ ಮುಳುಗಡೆಯಾಗಿದೆ. ಈ ಪ್ರದೇಶದಲ್ಲಿನ ಹೆಕ್ಟೇರ್‌ಗಳಷ್ಟು ಕೃಷಿ ಭೂಮಿ ಹಾನಿಯಾಗಿದೆ. ಪ್ರವಾಹದ ಪ್ರತ್ಯೇಕ ಘಟನೆಗಳಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅದೇ ರೀತಿ ಸಭಾಪೋಖರಿ ಗ್ರಾಮಾಂತರ ಪ್ರದೇಶದಲ್ಲೂ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ನೇಪಾಳ ಸೇನೆ, ನೇಪಾಳ ಪೊಲೀಸರು ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


