ವಿದೇಶ

ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯ

ಗ್ರೀಸ್​ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯ
ಅಪಘಾತದ ನಂತರದ ದೃಶ್ಯ
Published On :

ಅಥೆನ್ಸ್: ಗ್ರೀಸ್​ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಗ್ರೀಸ್ ರಾಜಧಾನಿ ಅಥೆನ್ಸ್ ಮತ್ತು ಥೆಸಲೋನಿಕಿ ನಡುವೆ ಅಥೆನ್ಸ್‌ನಿಂದ ಉತ್ತರಕ್ಕೆ 235 ಮೈಲುಗಳಷ್ಟು ದೂರದಲ್ಲಿರುವ ಟೆಂಪಿ ಬಳಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಹಲವು ಬೋಗಿಗಳು ಹಳಿತಪ್ಪಿದ್ದು, ಈ ಪೈಕಿ 3 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Story image

ಅಪಘಾತದಲ್ಲಿ 32 ಜನರು ಮೃತಪಟ್ಟು ಕನಿಷ್ಠ 85 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 25 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ಹತ್ತಿರದ ನಗರಗಳಿಂದ ಆಂಬ್ಯುಲೆನ್ಸ್‌ಗಳನ್ನು ಕರೆಸಲಾಗಿದೆ, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.