ನೇಪಾಳ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪೌಡೆಲ್ ಆಯ್ಕೆ
ನೇಪಾಳಿ ಕಾಂಗ್ರೆಸ್‌ನ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.

ಕಠ್ಮಂಡು: ನೇಪಾಳಿ ಕಾಂಗ್ರೆಸ್‌ನ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.
ನೇಪಾಳಿ ಕಾಂಗ್ರೆಸ್ ಮತ್ತು ಸಿಪಿಎನ್-ಮಾವೋವಾದಿ ಸೆಂಟರ್ ಒಳಗೊಂಡ ಎಂಟು ಪಕ್ಷಗಳ ಮೈತ್ರಿಕೂಟದ ಸಾಮಾನ್ಯ ಅಭ್ಯರ್ಥಿಯಾಗಿದ್ದ ಪೌಡೆಲ್ ಅವರು ಯುಎಂಎಲ್ ನ ಉಪಾಧ್ಯಕ್ಷ ಸುಭಾಷ್ ಚಂದ್ರ ನೆಂಬಾಂಗ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಪೌಡೆಲ್ ಅವರು 214 ಸಂಸತ್ ಸದಸ್ಯರ ಮತಗಳು ಮತ್ತು 352 ಪ್ರಾಂತೀಯ ಅಸೆಂಬ್ಲಿ ಸದಸ್ಯರ ಮತವನ್ನು ಪಡೆದಿದ್ದಾರೆ.
"ನೇಪಾಳ ಅಧ್ಯಕ್ಷರಾಗಿ ಆಯ್ಕೆಯಾದ ನನ್ನ ಸ್ನೇಹಿತ ರಾಮಚಂದ್ರ ಪೌಡೆಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು" ಎಂದು ನೇಪಾಳಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಅವರು ಟ್ವೀಟ್ ಮಾಡಿದ್ದಾರೆ.
ಸಂಸತ್ತಿನ 332 ಸದಸ್ಯರು ಮತ್ತು ಏಳು ಪ್ರಾಂತೀಯ ಅಸೆಂಬ್ಲಿಗಳಲ್ಲಿ ೫೫೦ ಸದಸ್ಯರು ಸೇರಿದಂತೆ ಒಟ್ಟು 882 ಸದಸ್ಯರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾವಣೆ ಮಾಡುವ ಅರ್ಹತೆ ಪಡೆದಿದ್ದಾರೆ.
ಆ ಪೈಕಿ 518 ಪ್ರಾಂತೀಯ ಅಸೆಂಬ್ಲಿ ಸದಸ್ಯರು ಮತ್ತು ಸಂಸತ್ತಿನ 313 ಸದಸ್ಯರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ವಕ್ತಾರ ಶಾಲಿಗ್ರಾಮ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


