ವಿದೇಶ

ಪ್ರಬಲ ಭೂಕಂಪನ: ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಸುನಾಮಿ ಆತಂಕ

ಫ್ರಾನ್ಸಿನ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಸುನಾಮಿ ಆತಂಕ ಎದುರಾಗಿದೆ.

ಪ್ರಬಲ ಭೂಕಂಪನ: ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಸುನಾಮಿ ಆತಂಕ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಫ್ರಾನ್ಸಿನ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಸುನಾಮಿ ಆತಂಕ ಎದುರಾಗಿದೆ.

ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಶುಕ್ರವಾರ 7.7 ತೀವ್ರತೆ ಪ್ರಬಲ ಭೂಕಂಪ ಸಂಭವಿಸಿದ್ದು, ಹೀಗಾಗಿ ವನವಾಟು ಸೇರಿದಂತೆ ದಕ್ಷಿಣ ಪೆಸಿಫಿಕ್‌ನ ದೇಶಗಳಿಗೆ ಸುನಾಮಿ ಎಚ್ಚರಿಕೆಗಳನ್ನು ನೀಡಲಾಗಿದೆ. ವನವಾಟು, ಫಿಜಿ ಮತ್ತು ನ್ಯೂ ಕ್ಯಾಲೆಡೋನಿಯಾಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ‘ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ (ಪಿಟಿಡಬ್ಲ್ಯುಸಿ)’ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆ ತನ್ನ ಪೂರ್ವ ಕರಾವಳಿಯಲ್ಲಿರುವ ಲಾರ್ಡ್ ಹೋವ್ ದ್ವೀಪಕ್ಕೆ ಅಪಾಯವಿದೆ ಎಂದು ಹೇಳಿದೆ.

ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಸುಮಾರು 38 ಕಿಮೀ (24 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂವಿಜ್ಞಾನ ಇಲಾಖೆ ಹೇಳಿದೆ. ಭೂಕಂಪದಿಂದಾಗಿ ತನ್ನ ಕರಾವಳಿ ಪ್ರದೇಶಕ್ಕೆ ಸುನಾಮಿ ಅಪ್ಪಳಿಸುವ ಸಾಧ್ಯತೆಗಳಿವೆಯೇ ಎಂಬುದನ್ನು ನಿರ್ಣಯಿಸುತ್ತಿರುವುದಾಗಿ ನ್ಯೂಜಿಲೆಂಡ್ ಹೇಳಿದೆ.

ಭೂಕಂಪದ ಕೇಂದ್ರಬಿಂದುವು ಫಿಜಿಯ ನೈಋತ್ಯ, ನ್ಯೂಜಿಲೆಂಡ್‌ನ ಉತ್ತರ ಮತ್ತು ಆಸ್ಟ್ರೇಲಿಯಾದ ಪೂರ್ವದಲ್ಲಿ ಕೋರಲ್ ಸಮುದ್ರವು ಪೆಸಿಫಿಕ್ ಅನ್ನು ಸಂಧಿಸುವ ಲಾಯಲ್ಟಿ ದ್ವೀಪಗಳ ಸಮೀಪದಲ್ಲಿ 37 ಕಿಲೋಮೀಟರ್ (23 ಮೈಲಿ) ಆಳದಲ್ಲಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.