ಎಲ್ ಸಾಲ್ವಡೋರ್: ಫುಟ್'ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ, 9 ಮಂದಿ ಸಾವು
ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸ್ಯಾನ್ ಸಾಲ್ವಡೋರ್: ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
‘ಕಸಕಾಟ್ಲನ್ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ಧಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಈ ಪೈಕಿ ಹಲವ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಲಿಯಾಂಜಾ ಮತ್ತು ಎಫ್‌ಎಎಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ರಾಜಧಾನಿ ಸ್ಯಾನ್ ಸಾಲ್ವಡಾರ್‌ನ ಕ್ರೀಡಾಂಗಣದ ಬಳಿ ಸಾಕಷ್ಟು ಜನರು ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


