ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ
ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

ಬಾಂಗ್ಲಾ: ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ. ಆಡಳಿತಾರೂಢ ಬಾಂಗ್ಲಾದೇಶ್ ಅವಾಮಿ ಲೀಗ್ ಗೆ ಸೇರ್ಪಡೆಯಾಗಿರುವ ಶಕೀಬ್ ಅಲ್ ಹಸನ್ ಮುಂದಿನ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಬಾಂಗ್ಲಾದೇಶದಲ್ಲಿ ಜ.07 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ನಡೆಯಲಿದೆ. ಶಕೀಬ್ ಅವರು 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಕ್ಕಾಗಿ ನಾಮಪತ್ರ ಫಾರ್ಮ್ ಗಳನ್ನು ಪಡೆದಿದ್ದಾರೆ ಎಂದು ಪಕ್ಷದ ಜಂಟಿ ಪ್ರಧಾನ ಕಾರ್ಯದರ್ಶಿ ಬಹಾವುದ್ದೀನ್ ನಸೀಮ್ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಪ್ರಮುಖ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅವರು ಸೆಲೆಬ್ರಿಟಿ ಮತ್ತು ದೇಶದ ಯುವಜನರಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿದ್ದಾರೆ" ಎಂದು ಕ್ರಿಕೆಟ್ ಆಲ್ರೌಂಡರ್ ನ್ನು ಸ್ವಾಗತಿಸಿದ ನಾಸಿಮ್ ಹೇಳಿದರು.
ಶಾಕಿಬ್ ಅವರ ಉಮೇದುವಾರಿಕೆಯನ್ನು ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಆಡಳಿತ ಪಕ್ಷದ ಸಂಸದೀಯ ಮಂಡಳಿಯು ದೃಢಪಡಿಸಬೇಕಾಗಿದೆ. ಅವರು ತಮ್ಮ ನೈಋತ್ಯ ತವರು ಜಿಲ್ಲೆ ಮಗರಾದಲ್ಲಿ ಅಥವಾ ರಾಜಧಾನಿ ಢಾಕಾದಲ್ಲಿ ಸ್ಪರ್ಧಿಸಲು ಆಶಿಸುತ್ತಿದ್ದಾರೆ ಎಂದು ನಾಸಿಮ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


