ಕಾಂಗೋ: ಸ್ಟೇಡಿಯಂನಲ್ಲಿ ನೇಮಕಾತಿ ವೇಳೆ ಕಾಲ್ತುಳಿತ; ಕನಿಷ್ಠ 37 ಮಂದಿ ಸಾವು
ರಿಪಬ್ಲಿಕ್ ಆಫ್ ಕಾಂಗೋದ ರಾಜಧಾನಿ ಬ್ರಾಝಾವಿಲ್ಲೆ ಕ್ರೀಡಾಂಗಣದಲ್ಲಿ ನಡೆದ ಸೇನಾ ನೇಮಕಾತಿ ವೇಳೆ ಸಂಭವಿಸಿದ ಭಾರಿ ಕಾಲ್ತುಳಿತದಲ್ಲಿ ಮೂವತ್ತೇಳು ಯುವಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರಿಪಬ್ಲಿಕ್ ಆಫ್ ಕಾಂಗೋ: ರಿಪಬ್ಲಿಕ್ ಆಫ್ ಕಾಂಗೋದ ರಾಜಧಾನಿ ಬ್ರಾಝಾವಿಲ್ಲೆ ಕ್ರೀಡಾಂಗಣದಲ್ಲಿ ನಡೆದ ಸೇನಾ ನೇಮಕಾತಿ ವೇಳೆ ಸಂಭವಿಸಿದ ಭಾರಿ ಕಾಲ್ತುಳಿತದಲ್ಲಿ ಮೂವತ್ತೇಳು ಯುವಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಕಳೆದ ವಾರ, ಕಾಂಗೋ-ಬ್ರಜಾವಿಲ್ಲೆ ಎಂದೂ ಕರೆಯಲ್ಪಡುವ ಮಧ್ಯ ಆಫ್ರಿಕಾದ ರಾಷ್ಟ್ರದ ಸೇನೆ, 18 ರಿಂದ 25 ವರ್ಷದ 1,500 ಜನರನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿತ್ತು.
ಇದನ್ನು ಓದಿ: ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ: ಇಸ್ರೇಲ್
ಬ್ರಾಝಾವಿಲ್ಲೆಯ ಹೃದಯಭಾಗದಲ್ಲಿರುವ ಮೈಕೆಲ್ ಡಿ'ಒರ್ನಾನೊ ಕ್ರೀಡಾಂಗಣ ನಡೆದ "ದುರಂತ"ದಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಅನಿರ್ದಿಷ್ಟ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ ಎಂದು ಪ್ರಧಾನಿ ಅನಾಟೊಲ್ ಕೊಲಿನೆಟ್ ಮಕೊಸೊ ಅವರು ಹೇಳಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಸೋಮವಾರ ರಾತ್ರಿ ಕಾಲ್ತುಳಿತ ಆರಂಭವಾದಾಗಲೂ ಅನೇಕ ಜನ ಕ್ರೀಡಾಂಗಣದಲ್ಲಿದ್ದರು. ಕೆಲವರು ಗೇಟ್ಗಳ ಮೂಲಕ ಬಲವಂತವಾಗಿ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಅನೇಕರು ಹರಸಾಹಸದಲ್ಲಿ ತುಳಿತಕ್ಕೊಳಗಾದರು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


