ಇಸ್ರೇಲ್-ಹಮಾಸ್ ಯುದ್ಧ: 4 ದಿನಗಳ ಕದನ ವಿರಾಮ ಆರಂಭ, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳುಗಳ ಬಿಡುಗಡೆ
ಇಸ್ರೇಲ್-ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಶುಕ್ರವಾರದಿಂದ ಆರಂಭಗೊಂಡಿದ್ದು, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳು ಸೇರಿದಂತೆ ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕತಾರ್ ಘೋಷಿಸಿದೆ.

ಟೆಲ್ ಅವೀವ್: ಇಸ್ರೇಲ್-ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಶುಕ್ರವಾರದಿಂದ ಆರಂಭಗೊಂಡಿದ್ದು, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳು ಸೇರಿದಂತೆ ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕತಾರ್ ಘೋಷಿಸಿದೆ.
ಕತಾರ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಮಾತನಾಡಿ, ಇಂದು ಬೆಳಿಗ್ಗೆ 7 ಗಂಟೆಯಿಂದ ಕದನ ವಿರಾಮವು ಪ್ರಾರಂಭವಾಗಿದ್ದು, ಮಹಿಳೆ ಮತ್ತು ಮಕ್ಕಳು ಸೇರಿದಂತೆ 13 ಮಂದಿ ಒತ್ತೆಯಾಳುಗಳನ್ನು ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬಿಡುಗಡೆ ಮಾಡಲು ನಿರ್ಧರಿಸಲಾದ ಪ್ಯಾಲೆಸ್ಟೀನ್ ಕೈದಿಗಳ ಪಟ್ಟಿಯನ್ನು ಇಸ್ರೇಲ್ ಗುಪ್ತಚರ ಇಲಾಖೆ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಟ್ಜಾಚಿ ಹನೆಗ್ಬಿ ಮಾತನಾಡಿ, ನಿರೀಕ್ಷೆಯಂತೆ ಪ್ರಕ್ರಿಯೆ ಗುರುವಾರ ಆರಂಭವಾಗಬೇಕಿತ್ತು. ‘ಒತ್ತೆಯಾಳುಗಳ ಬಿಡುಗಡೆಗಾಗಿ ಬಂಡುಕೋರರ ಜೊತೆಗೆ ಸಂಪರ್ಕದಲ್ಲಿದ್ದೇವೆ’ ಎಂದು ಹೇಳಿದ್ದಾರೆ.
ಹಂತ, ಹಂತವಾಗಿ ಹಮಾಸ್ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನ್ ಕೈದಿಗಳ ಬಿಡುಗಡೆ ಕುರಿತಂತೆ ಒಪ್ಪಂದ ಆಗಿತ್ತು. ‘ಮೂಲ ಒಪ್ಪಂದದಂತೇ ನಿಗದಿತ ಸ್ಥಳದಲ್ಲೇ ಬಿಡುಗಡೆ ಕಾರ್ಯ ನಡೆಯಲಿದೆ’ ಎಂದು ತಿಳಿಸಿದ್ದಾರೆ.
ಸೇನೆ ಆಧಿಕಾರಿಯೊಬ್ಬರು ಮಾತನಾಡಿ, ‘ತಾತ್ಕಾಲಿಕ ಕದನ ವಿರಾಮವು ಮುಂದೆ ಹೋಗಿದೆ. ಕಾರ್ಯಾಚರಣೆ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.
ವಿಳಂಬವು ಒತ್ತೆಯಾಳುಗಳ ಕುಟುಂಬ ಸದಸ್ಯರಲ್ಲಿ ಹಾಗೂ ಕದನ ವಿರಾಮದ ನಿರೀಕ್ಷೆಯಲ್ಲಿದ್ದ, 47 ದಿನಗಳಿಂದ ಭೀತಿಯಲ್ಲಿಯೇ ದಿನದೂಡುತ್ತಿರುವ ಗಾಜಾದ ಅಸಂಖ್ಯಾತ ನಿವಾಸಿಗಳಲ್ಲೂ ಆತಂಕವನ್ನು ಹೆಚ್ಚಿಸಿದೆ. ಕದನ ನಿರತ ಹಮಾಸ್ ಬಂಡುಕೋರರು ಹಾಗೂ ಇಸ್ರೇಲ್ ಸೇನೆಯ ನಡುವೆ ಒತ್ತೆಯಾಳುಗಳ ಬಿಡುಗಡೆಗಾಗಿ ಒಡಂಬಡಿಕೆ ಮೂಡಿತ್ತು. ಇಸ್ರೇಲ್, ಅಮೆರಿಕ, ಕತಾರ್ ಇದಕ್ಕಾಗಿ ಮಧ್ಯಸ್ಥಿಕೆಯನ್ನು ವಹಿಸಿದ್ದವು.
ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ನಡೆಸಿದ ಮಾರಕ ದಾಳಿಗಳಲ್ಲಿ ಹಮಾಸ್ ಉಗ್ರ ಸಂಘಟನೆ ಇಸ್ರೇಲನ್ನು ಕೆಣಕಿತ್ತು. 250ಕ್ಕೂ ಅಧಿಕ ಇಸ್ರೇಲಿ ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಒಯ್ದಿತ್ತು. ಪ್ರತಿಯಾಗಿ ಗಾಜಾದಲ್ಲಿ ಹಮಾಸ್ ಇರುವ ಕೇಂದ್ರಗಳ ಮೇಲೆ ಬಾಂಬ್ ದಾಳಿಗಳನ್ನು ಇಸ್ರೇಲ್ ನಡೆಸಿದೆ. 11,000ಕ್ಕೂ ಅಧಿಕ ಮಂದಿ ಈ ದಾಳಿಗಳಲ್ಲಿ ಮೃತಪಟ್ಟಿದ್ದಾರೆ. ಹಮಾಸ್‌ನ ಹಲವು ಉಗ್ರ ನಾಯಕರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಗಾಜಾದ ಹಲವು ಆಸ್ಪತ್ರೆಗಳ ಮೇಲೆ ರಾಕೆಟ್ ದಾಳಿ ನಡೆದಿದ್ದು, ಅಲ್ಲಿ ಹಮಾಸ್ ಉಗ್ರರರು ಬಳಸುವ ಸುರಂಗಗಳು ಪತ್ತೆಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


