ಅಮೆರಿಕ ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 1.40 ಲಕ್ಷ ವೀಸಾ ನೀಡಿದೆ: ಅಧಿಕಾರಿಗಳು
ಭಾರತದೊಂದಿಗೆ ಜನರ ನಡುವಿನ ಸಂಬಂಧವನ್ನು ಉತ್ತೇಜಿಸುವ ಬೈಡೆನ್ ಆಡಳಿತದ ಪ್ರಯತ್ನದ ಭಾಗವಾಗಿ, ಅಮೆರಿಕ ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳಿಗೆ 1,40,000 ಕ್ಕೂ ಹೆಚ್ಚು ವೀಸಾಗಳನ್ನು ನೀಡಿದೆ ಮತ್ತು ವೀಸಾಗಾಗಿ ಕಾಯುವ...

ವಾಷಿಂಗ್ಟನ್: ಭಾರತದೊಂದಿಗೆ ಜನರ ನಡುವಿನ ಸಂಬಂಧವನ್ನು ಉತ್ತೇಜಿಸುವ ಬೈಡೆನ್ ಆಡಳಿತದ ಪ್ರಯತ್ನದ ಭಾಗವಾಗಿ, ಅಮೆರಿಕ ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳಿಗೆ 1,40,000 ಕ್ಕೂ ಹೆಚ್ಚು ವೀಸಾಗಳನ್ನು ನೀಡಿದೆ ಮತ್ತು ವೀಸಾಗಾಗಿ ಕಾಯುವ ಅವಧಿಯನ್ನು ಕಡಿಮೆ ಮಾಡಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ವೀಸಾ ಸೇವೆಗಳ ಉಪ ಸಹಾಯಕ ರಾಜ್ಯ ಕಾರ್ಯದರ್ಶಿ ಜೂಲಿ ಸ್ಟಫ್ಟ್ ಅವರು, ಅಮೆಕದ ವಿವಿಗಳಲ್ಲಿ ದಾಖಲಾತಿ ಖಾತ್ರಿ ಪಡೆದಿರುವ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗುವ ಮೊದಲೇ ಸಂದರ್ಶಿಸಲು ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಗಳು ವಾರದಲ್ಲಿ ಆರು, ಏಳು ದಿನ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.
ಈ ವರ್ಷ, ಭಾರತದಿಂದ ಹೊರಬರುವ ವಿದ್ಯಾರ್ಥಿಗಳ ಬೇಡಿಕೆಯ ಮೇಲೆ ಗಮನ ಹರಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷ ನಾವು ಭಾರತದಲ್ಲಿ ಏನು ಮಾಡಿದ್ದೇವೆ ಎಂಬುದರ ಬಗ್ಗೆ ನಮಗೆ ನಿಜವಾಗಿಯೂ ಹೆಮ್ಮೆ ಇದೆ. ನಾನು ಇತಿಹಾಸದಲ್ಲಿ ಮೊದಲ ಬಾರಿಗೆ, ಭಾರತದಲ್ಲಿ ಒಂದು ಮಿಲಿಯನ್ ವೀಸಾಗಳನ್ನು ನೀಡುವ ಗುರಿಯನ್ನು ಹೊಂದಿದ್ದೇವೆ ಮತ್ತು ನಾವು ಅದನ್ನು ಸಾಧಿಸುತ್ತೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


