ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಮಧ್ಯೆ ಈಜಿಪ್ಟ್‌ನಲ್ಲಿ 2 ಇಸ್ರೇಲಿಗರಿಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಅಧಿಕಾರಿ!
ಈಜಿಪ್ಟ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಸ್ರೇಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಇಸ್ರೇಲಿಗಳು ಮತ್ತು ಈಜಿಪ್ಟಿನವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ.

ಕೈರೋ: ಈಜಿಪ್ಟ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಸ್ರೇಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಇಸ್ರೇಲಿಗಳು ಮತ್ತು ಈಜಿಪ್ಟಿನವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ.
ಈಜಿಪ್ಟ್ ಪೊಲೀಸ್ ಅಧಿಕಾರಿಯೊಬ್ಬರು ಅಲೆಕ್ಸಾಂಡ್ರಿಯಾ ನಗರದಲ್ಲಿ ಇಬ್ಬರು ಇಸ್ರೇಲಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ ಎಂದು ಅಲ್ ಜಜೀರಾ ಇಂಗ್ಲಿಷ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಶಂಕಿತ ಪೊಲೀಸ್ ಅಧಿಕಾರಿ ಬಂಧನ
ಅಲೆಕ್ಸಾಂಡ್ರಿಯಾದ ಪಾಂಪೀಸ್ ಕಾಲಮ್‌ನ ಸ್ಥಳದಲ್ಲಿ ನಡೆದ ದಾಳಿಯಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಶಂಕಿತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂಬುದನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ.
ಬಂದರು ನಗರ ಅಲೆಕ್ಸಾಂಡ್ರಿಯಾದಲ್ಲಿ ಇಸ್ರೇಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ ಎಂಬ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಈಜಿಪ್ಟ್‌ನ ವಿದೇಶಾಂಗ ಸಚಿವಾಲಯ ಹೇಳಿದೆ.
ಆರ್‌ಟಿ ಅರೇಬಿಕ್ ಔಟ್‌ಲೆಟ್ ಈಜಿಪ್ಟಿನ ಪೋಲೀಸ್‌ನಿಂದ ಇಬ್ಬರು ಇಸ್ರೇಲಿಗರನ್ನು ಕೊಂದಿದೆ ಎಂದು ವರದಿ ಮಾಡಿದೆ. ಆರ್ಟಿ ಅರೇಬಿಕ್ ಪ್ರಕಾರ, ನಗರದ ಅಮೌದ್ ಅಲ್-ಸವಾರಿ ಪ್ರದೇಶದಲ್ಲಿ ಇಸ್ರೇಲಿ ಪ್ರವಾಸಿಗರ ಗುಂಪಿನ ಮೇಲೆ ಪೋಲೀಸ್ ತನ್ನ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿದ ಎಂದು ಭದ್ರತಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


