ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ: ಸಾವಿನ ಸಂಖ್ಯೆ 400ಕ್ಕೆ ಏರಿಕೆ
ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಭಾನುವಾರ ವರದಿ ಮಾಡಿದೆ.

ಟೆಲ್ ಅವಿವ್(ಇಸ್ರೇಲ್): ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಭಾನುವಾರ ವರದಿ ಮಾಡಿದೆ.
ಉಗ್ರರ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ 400ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 2,048ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಮೂಲದ ಮಾಧ್ಯಮ ವರದಿ ಮಾಡಿದೆ.
ಹಮಾಸ್ ರಾಕೆಟ್ ದಾಳಿ ಪ್ರಾರಂಭಿಸಿದ 24 ಗಂಟೆಗಳ ನಂತರ, ಗಾಜಾ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, IDF ಎಲ್ಲಾ ಭಯೋತ್ಪಾದಕರನ್ನು ತಟಸ್ಥಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಪ್ಯಾಲೆಸ್ತೀನ್ನ ಭಯೋತ್ಪಾದಕ ಸಂಘಟನೆ ಹಮಾಸ್ ಕೇವಲ 20 ನಿಮಿಷಗಳಲ್ಲಿ ಇಸ್ರೇಲ್ ಮೇಲೆ 5 ಸಾವಿರ ರಾಕೆಟ್ಗಳನ್ನು ಹಾರಿಸಿದ್ದು, ಈ ಸಂರ್ಷದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚಾಗತೊಡಗಿದೆ.
ಇನ್ನೂ ಪ್ರತೀಕಾರದ ದಾಳಿಯಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ 230 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಹಮಾಸ್ ಹಲವು ಇಸ್ರೇಲಿ ಸೈನಿಕರು ಹಾಗೂ ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿರಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


