ಬಾಂಗ್ಲಾದೇಶ: ರೈಲು ಅಪಘಾತದಲ್ಲಿ 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರೆ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಢಾಕಾ: ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರೆ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಯನ್ನು ಗಮನಿಸಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಬಾಂಗ್ಲಾದೇಶದ ಪೂರ್ವದಲ್ಲಿರುವ ಭೈರಾಮ್ ನಲ್ಲಿ ಸರಕು ಸಾಗಣೆ ರೈಲು ಪ್ರಯಾಣಿಕ ರೈಲಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರೈಲು ಹಳಿತಪ್ಪಿ ಈ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
"ಈ ವರೆಗೂ 15 ಶವಗಳು ಪತ್ತೆಯಾಗಿವೆ.ಹಲವರು ಗಾಯಗೊಂಡಿದ್ದಾರೆ" ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್ ಪಿ ಗೆ ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ ಈಶಾನ್ಯಕ್ಕೆ 60 ಕಿಲೋಮೀಟರ್ (38 ಮೈಲುಗಳು) ದೂರದಲ್ಲಿ ಈ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


