ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!
ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.

ನವದೆಹಲಿ: ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.
ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ಕತಾರ್‌ನ ಪ್ರಥಮ ಹಂತದ ನ್ಯಾಯಾಲಯವು ಗುರುವಾರ ಮರಣದಂಡನೆ ವಿಧಿಸಿತು. ಆದರೆ, ಈ ತೀರ್ಪನ್ನು ಆಘಾತಕಾರಿ ಎಂದು ಭಾರತ ಬಣ್ಣಿಸಿದ್ದು, ಪ್ರಕರಣದಲ್ಲಿ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸಲು ಪ್ರತಿಜ್ಞೆ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈ ಶಂಕರ್, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಇಂದು ಬೆಳಿಗ್ಗೆ ಭೇಟಿಯಾದೆ. ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಸರ್ಕಾರ ಎಲ್ಲಾ ಪ್ರಯತ್ನ ಮುಂದುವರಿಸುತ್ತದೆ. ಈ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಖಾಸಗಿ ಕಂಪನಿ ಅಲ್ ದಹ್ರಾ ಜೊತೆ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಆದರೆ, ಕತಾರ್ ಅಧಿಕಾರಿಗಳಾಗಲಿ ಅಥವಾ ಭಾರತ ಸರ್ಕಾರವಾಗಲಿ ಭಾರತೀಯ ಪ್ರಜೆಗಳ ವಿರುದ್ಧದ ಆರೋಪಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


