ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಗೆ ಕೋವಿಡ್ ಪಾಸಿಟಿವ್, ಅಧ್ಯಕ್ಷ ಜೊ ಬೈಡನ್ ಗೆ ನೆಗೆಟಿವ್
ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಶ್ವೇತಭವನ ತಿಳಿಸಿದೆ. ಆದರೆ ಅಧ್ಯಕ್ಷ ಜೊ ಬೈಡನ್ ಅವರಿಗೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.

ವಾಷಿಂಗ್ಟನ್: ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಶ್ವೇತಭವನ ತಿಳಿಸಿದೆ. ಆದರೆ ಅಧ್ಯಕ್ಷ ಜೊ ಬೈಡನ್ ಅವರಿಗೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.
72 ವರ್ಷದ ಜಿಲ್ ಬೈಡನ್ ಅವರಿಗೆ ಕೋವಿಡ್ ನ ಸೌಮ್ಯ ಲಕ್ಷಣಗಳು ಕಂಡುಬಂದಿದೆ. ರೆಹೋಬೋತ್ ಬೀಚ್‌ನಲ್ಲಿರುವ ದಂಪತಿ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಶ್ವೇತಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ ಬೈಡನ್ ಅವರಿಗೆ 2022ರ ಆಗಸ್ಟ್ ನಲ್ಲಿ ಕೂಡ ಕೋವಿಡ್ ಲಕ್ಷಣ ಕಾಣಿಸಿಕೊಂಡಿತ್ತು. ಜೊ ಬೈಡನ್ ಅವರಿಗೆ ಸಹ ಕಳೆದ ವರ್ಷ ಜುಲೈ 2022ರಲ್ಲಿ ಕೋವಿಡ್ ಪಾಸಿಟಿವ್ ಬಂದಿತ್ತು.
ಈ ವಾರ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು ಅದರಲ್ಲಿ ಜೊ ಬೈಡನ್ ಅವರು ಸಹ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 7ರಂದು ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸೆಪ್ಟೆಂಬರ್ 8ರಂದು ಶೃಂಗಸಭೆಯ ಹೊರಗೆ ಪ್ರಧಾನಿ ಮೋದಿಯವರ ಜೊತೆ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


