ಭಾರತ-ಆಸಿಯಾನ್ ಸಹಕಾರ ಬಲಪಡಿಸಲು 12 ಅಂಶಗಳ ಪ್ರಸ್ತಾವನೆ ಮಂಡಿಸಿದ ಪ್ರಧಾನಿ ಮೋದಿ
ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು.

ಜಕಾರ್ತಾ: ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು.
ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಆಸಿಯಾನ್‌ನ ಪ್ರಧಾನ ಕಾರ್ಯದರ್ಶಿ(ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಡಾ ಕಾವೊ ಕಿಮ್ ಹರ್ನ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.
ಶೃಂಗಸಭೆಯಲ್ಲಿ ಎರಡು ಜಂಟಿ ಹೇಳಿಕೆಗಳು - ಒಂದು ಕಡಲ ಸಹಕಾರ ಮತ್ತು ಇನ್ನೊಂದು ಆಹಾರ ಭದ್ರತೆಯ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(MEA) ಪ್ರಕಟಣೆಯಲ್ಲಿ ತಿಳಿಸಿದೆ.
ಶೃಂಗಸಭೆಯಲ್ಲಿ, ಆಸಿಯಾನ್-ಭಾರತದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಅದರ ಭವಿಷ್ಯದ ಕೋರ್ಸ್ ಅನ್ನು ರೂಪಿಸುವ ಕುರಿತು ಆಸಿಯಾನ್ ಪಾಲುದಾರರೊಂದಿಗೆ ಪ್ರಧಾನಿ ಮೋದಿ ವ್ಯಾಪಕ ಚರ್ಚೆ ನಡೆಸಿದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಧಾನಿ ಮೋದಿ ಅವರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಆಸಿಯಾನ್ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು ಮತ್ತು ಆಸಿಯಾನ್-ಭಾರತ ಮುಕ್ತ ವ್ಯಾಪಾರ ಒಪ್ಪಂದದ(ಎಐಟಿಜಿಎ) ಪರಿಶೀಲನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಸಂಪರ್ಕ, ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆ, ಭಯೋತ್ಪಾದನೆಯಂತಹ ಸಮಕಾಲೀನ ಸವಾಲುಗಳನ್ನು ಎದುರಿಸುವುದು, ಜನರಿಂದ ಜನರ ಸಂಪರ್ಕಗಳು ಮತ್ತು ಕಾರ್ಯತಂತ್ರವನ್ನು ಗಾಢವಾಗಿಸುವ ಭಾರತ-ಆಸಿಯಾನ್ ಸಹಕಾರ ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ಮೋದಿ ಮಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


