ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೀಕರ ಭೂಕಂಪನ: 632 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಆಫ್ರಿಕಾದ ಮೊರಾಕ್ಕೊದಲ್ಲಿ ಮುಂಜಾನೆ ವೇಳೆ ಭಾರೀ ಪ್ರಮಾಣದ ಭೂಕಂಪನ ಸಂಭವಿಸಿದೆ. ಪರಿಣಾಮವಾಗಿ ಅನೇಕ ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 632 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ

ರಬಾತ್: ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು 632 ಜನರು ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ಮನೆಗಳು, ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಎಂದು ಮೊರಾಕ್ಕೊ ಪೊಲೀಸರು ಹೇಳಿದ್ದಾರೆ.
ಮರ್ರಾಕೆಚ್‌ನ ನೈಋತ್ಯ ಭಾಗ ಭೂಕಂಪನಕ್ಕೆ ಗುರಿಯಾಗುವ ಪ್ರದೇಶವಾಗಿದೆ. 2004ರಲ್ಲಿ ಈಶಾನ್ಯ ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ 628 ಮಂದಿ ಮೃತಪಟ್ಟಿದ್ದರು.
ಸುದ್ದಿ ಸಂಸ್ಥೆಗಳ ಪ್ರಕಾರ, ಭೀಕರ ಭೂಕಂಪದಿಂದಾಗಿ ಹಲವು ಹಳೆಯ ಕಟ್ಟಡಗಳು ಕುಸಿದಿವೆ. ನಗರದಲ್ಲಿ ಆಂಬ್ಯುಲೆನ್ಸ್ ಹಾಗೂ ತುರ್ತು ಸೇವೆಗಳ ಕೊರತೆ ಕೂಡ ಕಾಡಿದೆ. ಮತ್ತೆ ಭೂಕಂಪನದ ಭೀತಿಯಿಂದ ಜನರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಭೂಕಂಪವು ಎಷ್ಟು ಪ್ರಬಲವಾಗಿದೆಯೆಂದರೆ, ಕೇಂದ್ರಬಿಂದುವಾದ ಮರ್ರಾಕೇಶ್‌ನಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ರಬಾತ್‌ನಲ್ಲಿಯೂ ಇದರ ಪ್ರಭಾವ ಕಂಡುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


