ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡ: ಕೆನಡಾ ಪ್ರಧಾನಿ ಆರೋಪ; ಭಾರತೀಯ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ
ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.

ಒಟ್ಟವಾ: ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಾದ ಈ ರಾಜತಾಂತ್ರಿಕ ಕ್ರಮವು ಒಟ್ಟಾವಾ ಮತ್ತು ದೆಹಲಿ ನಡುವಿನ ಸಂಬಂಧವನ್ನು ಹದಗೆಡಿಸಿದೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಹೌಸ್ ಆಫ್ ಕಾಮನ್ಸ್ ಅನ್ನು ಉದ್ದೇಶಿಸಿ ಮಾತನಾಡುತ್ತಾ, ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ "ಪ್ರಬಲ ಆರೋಪಗಳು" ಇವೆ ಎಂದು ಹೇಳಿದರು. ನಮ್ಮ ಸರ್ಕಾರವು ಈ ಆರೋಪಗಳ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ. ಜಸ್ಟಿನ್ ಟ್ರುಡೊ ಅವರು ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಭಾರತ ಸರ್ಕಾರದ ಸಹಕಾರವನ್ನು ಕೋರಿದ್ದಾರೆ.
ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲೀ ಅವರು ಟ್ರುಡೊ ಸರ್ಕಾರವು ತಕ್ಷಣದ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ಅಧಿಕಾರಿಯ ಹೆಸರು ಉಲ್ಲೇಖಿಸದ ವಿದೇಶಾಂಗ ಸಚಿವರು, ಇಂದು ನಾವು ಹಿರಿಯ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದ್ದೇವೆ ಎಂದು ಹೇಳಿದರು. ಉಚ್ಛಾಟಿತ ಭಾರತೀಯ ರಾಜತಾಂತ್ರಿಕರು ಕೆನಡಾದಲ್ಲಿರುವ ಭಾರತದ ವಿದೇಶಿ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥರಾಗಿದ್ದಾರೆ ಎಂದು ಜೋಲಿ ಹೇಳಿದ್ದಾರೆ.
ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಭಾರತವು ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿತ್ತು ಎಂಬುವುದು ಉಲ್ಲೇಖನೀಯ, ಈ ಮಧ್ಯೆ ಜೂನ್ 18 ರಂದು, ವ್ಯಾಂಕೋವರ್‌ನ ಉಪನಗರವಾದ ಸರ್ರೆಯ ಗುರುದ್ವಾರದ ಬಳಿ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ನಿಜ್ಜರ್ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಿದ ಆರೋಪ ಹೊತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


