ಪಾಕಿಸ್ತಾನದಲ್ಲಿ ಮುಂದಿನ ವರ್ಷ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ
ಪಾಕಿಸ್ತಾನದ ಚುನಾವಣಾ ಆಯೋಗ ಗುರುವಾರ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು 2024ರ ಜನವರಿ ಕೊನೆಯ ವಾರದಲ್ಲಿ ನಡೆಯಲಿವೆ ಎಂದು ಘೋಷಿಸಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ಚುನಾವಣಾ ಆಯೋಗ ಗುರುವಾರ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು 2024ರ ಜನವರಿ ಕೊನೆಯ ವಾರದಲ್ಲಿ ನಡೆಯಲಿವೆ ಎಂದು ಘೋಷಿಸಿದೆ.
ಕ್ಷೇತ್ರಗಳ ಮರು ವಿಂಗಡಣೆಯ ಕೆಲಸವನ್ನು ಪರಿಶೀಲಿಸಿದ್ದು, ಕ್ಷೇತ್ರಗಳ ವಿಂಗಡಣೆಯ ಆರಂಭಿಕ ಪಟ್ಟಿಯನ್ನು ಸೆಪ್ಟೆಂಬರ್ 27 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಲಿಸಿದ ನಂತರ ನವೆಂಬರ್ 30 ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಆಯೋಗ ಹೇಳಿದೆ.
2024ರ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಆಗಸ್ಟ್ 9 ರಂದು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ, 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


