ಪಾಕಿಸ್ತಾನದಲ್ಲಿ ಉಗ್ರರ ಪೈಶಾಚಿಕ ದಾಳಿ: 23 ಯೋಧರು ಸಾವು
ಪಾಕಿಸ್ತಾನದ ತಾಲಿಬಾನ್ ನೊಂದಿಗೆ ನಂಟು ಹೊಂದಿರುವ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 23 ಯೋಧರು ಸಾವನ್ನಪ್ಪಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ತಾಲಿಬಾನ್ ನೊಂದಿಗೆ ನಂಟು ಹೊಂದಿರುವ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 23 ಯೋಧರು ಸಾವನ್ನಪ್ಪಿದ್ದಾರೆ. ಖೈಬರ್-ಪಕ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಪೋಸ್ಟ್‌ಗೆ ಸ್ಫೋಟಕ ತುಂಬಿದ ಟ್ರಕ್ ನ್ನು ಡಿಕ್ಕಿ ಹೊಡೆಸಿ ಸೈನಿಕರನ್ನು ಹತ್ಯೆಗೈಯಲಾಗಿದೆ ಎಂದು ಸೇನೆ ತಿಳಿಸಿದೆ.
ದಕ್ಷಿಣ ವಜಿರಿಸ್ತಾನ್ ಬುಡಕಟ್ಟು ಜಿಲ್ಲೆಯ ಗಡಿಯಲ್ಲಿರುವ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಉಗ್ರರ ಪ್ರವೇಶ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಭಯೋತ್ಪಾದಕರು ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ - ಸೇನೆಯ ಮಾಧ್ಯಮ ವಿಭಾಗ ಹೇಳಿದೆ.
ದಾಳಿಯ ನಂತರ ಮತ್ತೊಂದು ಆತ್ಮಹತ್ಯಾ ದಾಳಿ ನಡೆದಿದ್ದು, ಕಟ್ಟಡದ ಕುಸಿತವಾಗಿದೆ. ಇದರಿಂದ ಅನೇಕ ಸಾವುನೋವು ಉಂಟಾಗಿದೆ. ದಾರಬನ್ ಪ್ರದೇಶದಲ್ಲಿನ ಭದ್ರತಾ ಪಡೆಗಳ ಪೋಸ್ಟ್ ಮೇಲೆ ಆರು ಭಯೋತ್ಪಾದಕರ ಗುಂಪು ದಾಳಿ ಮಾಡಿದ್ದರಿಂದ ಕನಿಷ್ಠ 23 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


