ಜಾಗತಿಕ ಸವಾಲು ಎದುರಿಸಲು ಭಾರತಕ್ಕೆ ಅಮೆರಿಕಾದ ಸಹಕಾರ ವಿಸ್ತರಣೆ: ಆಂಟೋನಿ ಬ್ಲಿಂಕೆನ್
ಜಾಗತಿಕ ಸವಾಲು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರವನ್ನು ವಿಸ್ತರಿಸುತ್ತದೆ ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಸೆಕ್ರೆಟರಿ ಆಂಟೋನಿ ಬ್ಲಿಂಕೆನ್ ಭರವಸೆ ನೀಡಿದ್ದಾರೆ.

ವಾಷಿಂಗ್ಟನ್: ಜಾಗತಿಕ ಸವಾಲು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರವನ್ನು ವಿಸ್ತರಿಸುತ್ತದೆ ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಸೆಕ್ರೆಟರಿ ಆಂಟೋನಿ ಬ್ಲಿಂಕೆನ್ ಭರವಸೆ ನೀಡಿದ್ದಾರೆ.
ಜಾಗತಿಕ ಸವಾಲುಗಳನ್ನು ಎದುರಿಸಲು ಯುನೈಟೆಡ್ ಸ್ಟೇಟ್ಸ್ ಭಾರತದೊಂದಿಗೆ ಸಹಕಾರವನ್ನು ವಿಸ್ತರಿಸುತ್ತಿದೆ. ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳವಾಗಿ ಚರ್ಚಿಸಲು ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಉತ್ತಮ ಸಭೆ ನಡೆಸಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.
ದೋವಲ್ ಅವರು ಅಮೆರಿಕದ ಅಧಿಕೃತ ಭೇಟಿಯಲಿದ್ದು, ಉಭಯ ದೇಶಗಳ ಸಂಬಂಧ ಮುಂದುವರೆಸುವ ಕುರಿತು ಮಾತುಕತೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಿರ್ಣಾಯಕ ಸಮಯದೊಳಗೆ ಫಲಿತಾಂಶ ಆಧಾರಿತ ವಿತರಣೆಗಳನ್ನು ಸಾಧಿಸಲು ನಿರಂತರ ಗಮನವನ್ನು ಕಾಪಾಡಿಕೊಳ್ಳಲು ಎರಡು ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


