ವಿದೇಶ

ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಬುಧವಾರ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೃಷ್ಟಿಸಿದೆ.

ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೇರ್ಪಡೆ
ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೇರ್ಪಡೆ
Published On :

ನ್ಯೂಯಾರ್ಕ್‌: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಬುಧವಾರ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೃಷ್ಟಿಸಿದೆ.

ಮೋದಿ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ದೇಶಗಳ ಜನರು ಭಾಗವಹಿಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಯೋಗದಿನಾಚರಣೆಯಲ್ಲಿ ನ್ಯೂಯಾರ್ಕ್ ಮೇಯರ್, ವಿಶ್ವಸಂಸ್ಥೆ ಅಧಿಕಾರಿಗಳು ಸೇರಿದಂತೆ 180 ದೇಶಗಳ ಹಲವು ಗಣ್ಯರು ಭಾಗವಹಿಸಿದ್ದರು.

ಈ ಮೂಲಕ ಒಂದೇ ವೇದಿಕೆಯಲ್ಲಿ, ಒಂದೇ ಸಮಯದಲ್ಲಿ ಅತಿ ಹೆಚ್ಚು ದೇಶಗಳ ಜನರು ಒಟ್ಟಿಗೆ ಯೋಗಾಭ್ಯಾಸ ಮಾಡುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಯೋಗಾಭ್ಯಾಸದಲ್ಲಿ ಹೆಚ್ಚಿನ ದೇಶಗಳ ಜನ ಭಾಗವಹಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.