ಈಜಿಪ್ಟ್ಗೆ ಆಗಮಿಸಿದ ಪ್ರಧಾನಿ ಮೋದಿ, ನಾಳೆ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಭೇಟಿ
ಮೊದಲ ಬಾರಿ ಈಜಿಪ್ಟ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೈರೋಗೆ ಆಗಮಿಸಿದ್ದು, ಈಜಿಪ್ಟ್ ಪ್ರಧಾನಿ ಮುಸ್ತಫಾ ಬದ್ಬೌಲಿ ಸ್ವಾಗತಿಸಿದ್ದಾರೆ.

ಕೈರೋ: ಮೊದಲ ಬಾರಿ ಈಜಿಪ್ಟ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೈರೋಗೆ ಆಗಮಿಸಿದ್ದು, ಈಜಿಪ್ಟ್ ಪ್ರಧಾನಿ ಮುಸ್ತಫಾ ಬದ್ಬೌಲಿ ಸ್ವಾಗತಿಸಿದ್ದಾರೆ.
ಇಂದು ಕೈರೋ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ವಿಶೇಷ ಗೌರವಾರ್ಥವಾಗಿ ಈಜಿಪ್ಟ್ ಪ್ರಧಾನಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಆಗಮನದ ವೇಳೆ ಪ್ರಧಾನಿ ಮೋದಿ ಅವರು ಗಾರ್ಡ್ ಆಫ್ ಹಾನರ್ ಅನ್ನು ಸಹ ಪಡೆದಿದ್ದಾರೆ.
ಎರಡು ದಿನಗಳ ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಭಾನುವಾರ ಭಾರತದ ದಾವೂದಿ ಬೊಹ್ರಾ ಸಮುದಾಯದ ಸಹಾಯದಿಂದ ನವೀಕರಣಗೊಂಡಿರುವ ಕೈರೋದ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ.
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಸೇರಿದಂತೆ ಈಜಿಪ್ಟಿನ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಇದು ಪ್ರಧಾನಿಯಾಗಿ ಮೋದಿಯವರ ಮೊದಲ ಈಜಿಪ್ಟ್ ಭೇಟಿಯಾಗಿದ್ದು, 26 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


