ವಿದೇಶ

ಬಿಜೆಪಿಗೆ 'ಶಾಶ್ವತವಾಗಿ' ಅಧಿಕಾರದಲ್ಲಿರುವ ಭ್ರಮೆ, ಆದರೆ ಅದು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಬಿಜೆಪಿಗೆ 'ಶಾಶ್ವತವಾಗಿ' ಅಧಿಕಾರದಲ್ಲಿರುವ ಭ್ರಮೆ, ಆದರೆ ಅದು ಸಾಧ್ಯವಿಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ಲಂಡನ್: ಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಲಂಡನ್‌ನ ಚಥಮ್ ಹೌಸ್ ಥಿಂಕ್ ಟ್ಯಾಂಕ್‌ನಲ್ಲಿ ಸೋಮವಾರ ಸಂಜೆ ನಡೆದ ಸಂವಾದದಲ್ಲಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, ದೇಶದಲ್ಲಿ ಭಿನ್ನಾಭಿಪ್ರಾಯ ಹತ್ತಿಕ್ಕುವ ಯತ್ನ ನಡೆಯುತ್ತಿದ್ದು, ಇಸ್ರೇಲಿ ಸಾಫ್ಟ್‌ವೇರ್ ಪೆಗಾಸಸ್ ಅನ್ನು ತಮ್ಮ ಫೋನ್‌ನಲ್ಲಿ ಹಾಕಲಾಗಿದೆ ಎಂದು ಮತ್ತೊಮ್ಮೆ ಆರೋಪಿಸಿದರು.

"ಅಧಿಕಾರದ ದೃಷ್ಟಿಕೋನದಲ್ಲಿ ಹೇಳುವುದಾದರೆ, ಸ್ವಾತಂತ್ರ್ಯದಿಂದ ಇಲ್ಲಿಯವರೆಗಿನ ಬಹುಪಾಲು ಸಮಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ" ಎಂದು ರಾಹುಲ್ ಗಾಂಧಿ ಹೇಳಿದರು.

"ಬಿಜೆಪಿ 10 ವರ್ಷಗಳ ಹಿಂದೆ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ನಾವು 10 ವರ್ಷ ಅಧಿಕಾರದಲ್ಲಿದ್ದೆವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತಾನೇ ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತೇನೆ ಎಂದು ನಂಬಿದೆ. ಆದರೆ ಅದು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದ್ದಾರೆ.

"ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ಹಿಡಿದಿಟ್ಟುಕೊಳ್ಳಲು ಅವರು(ಬಿಜೆಪಿ) ಯಶಸ್ವಿಯಾಗಿದ್ದಾರೆ. ಇದು ತುಂಬಾ ಅಪಾಯಕಾರಿ. ನಿಸ್ಸಂಶಯವಾಗಿಯೂ ಸ್ವಾತಂತ್ರ್ಯದ ಕಲ್ಪನೆಯ ಮೇಲೆ, ಸ್ವತಂತ್ರ ಸಂಸ್ಥೆಗಳನ್ನು, ಸಂಪೂರ್ಣ ದುರಸ್ತಿ ಮಾಡುವ ಅಗತ್ಯವಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.