ವಿದೇಶ

ಪ್ರಧಾನಿ ಮೋದಿಗೆ ಫಿಜಿ, ಪಪುವಾ ನ್ಯೂ ಗಿನಿ ಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪಪುವಾ ನ್ಯೂಗಿನಿ ಮತ್ತು ಫಿಜಿ ದೇಶಗಳ ಅತ್ಯುನ್ನತ ನಾಗರಿಕ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಪ್ರಧಾನಿ ಮೋದಿಗೆ ಫಿಜಿ, ಪಪುವಾ ನ್ಯೂ ಗಿನಿ ಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ
Published On :

ಫೋರ್ಟ್ ಮೊರೆಸ್ಬಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪಪುವಾ ನ್ಯೂ ಗಿನಿ ಮತ್ತು ಫಿಜಿ ದೇಶಗಳ ಅತ್ಯುನ್ನತ ನಾಗರಿಕ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಪಪುವಾ ನ್ಯೂ ಗಿನಿ ಗವರ್ನರ್ ಜನರಲ್ ಸರ್ ಬಾಬ್ ದಾಡೇ ಅವರು ನರೇಂದ್ರ ಮೋದಿ ಅವರಿಗೆ ಗ್ರಾಂಡ್ ಚಾಂಪಿಯನ್ ಆಫ್ ದಿ ಆರ್ಡರ್ ಆಫ್ ಲೆಗೊಹು ಪುರಸ್ಕಾರ ನೀಡಿ ಗೌರವಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇದು ಇಲ್ಲಿನ ಅತ್ಯುನ್ನತ ನಾಗರಿಕ ಪುರಸ್ಕಾರವಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಪ್ರಧಾನಿ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೂರದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಶಕ್ತಿಯಾಗಿದೆ. ಇದು ವಿಶ್ವದಾದ್ಯಂತ ಭಾರತದ ಬಾಂಧವ್ಯ ಬೆಳೆಯುತ್ತಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.