ಅಮೆರಿಕಾದಲ್ಲಿ ಭಾರತೀಯ ಮೂಲದ ದಂಪತಿ, ಇಬ್ಬರು ಮಕ್ಕಳು ಮನೆಯಲ್ಲಿ ಶವವಾಗಿ ಪತ್ತೆ
ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ಭಾರತೀಯ ಮೂಲದ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನ್ಯೂಯಾರ್ಕ್: ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ಭಾರತೀಯ ಮೂಲದ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತರನ್ನು ತೇಜ್ ಪ್ರತಾಪ್ ಸಿಂಗ್(43) ಮತ್ತು ಸೋನಾಲ್ ಪರಿಹಾರ್ (42) ಅವರು 10 ವರ್ಷದ ಮಗ ಮತ್ತು 6 ವರ್ಷದ ಮಗಳೊಂದಿಗೆ ತಮ್ಮ ಪ್ಲೇನ್ಸ್‌ಬರೋ ಮನೆಯಲ್ಲಿ ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆ ತಿಳಿಸಿದೆ.
ಮಿಡ್ಲ್‌ಸೆಕ್ಸ್ ಕೌಂಟಿ ಪ್ರಾಸಿಕ್ಯೂಟರ್ ಯೋಲಾಂಡಾ ಸಿಕ್ಕೋನ್ ಮತ್ತು ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆಯ ಮುಖ್ಯ ಎಮಾನ್ ಬ್ಲಾಂಚಾರ್ಡ್ ಅವರು, ಪ್ರಸ್ತುತ ನರಹತ್ಯೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗುರುವಾರ ಹೇಳಿದ್ದಾರೆ.
ಅಕ್ಟೋಬರ್ 4 ರ ಸಂಜೆ, ಅಧಿಕಾರಿಗಳು ಪ್ಲೇನ್ಸ್‌ಬೊರೊದಲ್ಲಿನ ನಿವಾಸದಲ್ಲಿ ಸುರಕ್ಷತೆ ಪರಿಶೀಲನೆಗಾಗಿ 911ಕ್ಕೆ ಕರೆ ಬಂದಿತ್ತು. ನಂತರ ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆಯು ಆ ಮನೆಗೆ ತೆರಳಿ ಪರಿಶೀಲಿಸಿದಾಗ ನಾಲ್ವರ ಮೃತದೇಹಗಳು ಪತ್ತೆಯಾಗಿವೆ” ಎಂದು ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಈ ದುರಂತದ ಬಗ್ಗೆ ತನಿಖೆ ನಡೆಯುತ್ತಿದೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಸಲಾಗುತ್ತಿದೆ". ಸಾರ್ವಜನಿಕರಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


