ವಿದೇಶ

ಪಾಕಿಸ್ತಾನ ತನ್ನ ಸಾರ್ವಭೌಮತ್ವ ಕಾಪಾಡಲು ಬದ್ಧ: ರಾಜನಾಥ್ ಸಿಂಗ್ ಹೇಳಿಕೆ ಖಂಡಿಸಿದ ಪಾಕ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಯನ್ನು ಖಂಡಿಸಿದ ಪಾಕಿಸ್ತಾನ, ತನ್ನ ಸಾರ್ವಭೌಮತ್ವವನ್ನು ಕಾಪಾಡಲು ಬದ್ಧ ಮತ್ತು ಸಾಮರ್ಥ್ಯದಲ್ಲಿ ತಾನು ದೃಢವಾಗಿ ನಿಂತಿರುವುದಾಗಿ ಪಾಕಿಸ್ತಾನ ಶನಿವಾರ ಹೇಳಿದೆ.

ಪಾಕಿಸ್ತಾನ ತನ್ನ ಸಾರ್ವಭೌಮತ್ವ ಕಾಪಾಡಲು ಬದ್ಧ: ರಾಜನಾಥ್ ಸಿಂಗ್ ಹೇಳಿಕೆ ಖಂಡಿಸಿದ ಪಾಕ್
ರಾಜನಾಥ್ ಸಿಂಗ್
Published On :

ಇಸ್ಲಾಮಾಬಾದ್: ಉಗ್ರರು ಭಾರತದಲ್ಲಿ ದಾಳಿ ಮಾಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಿದರೆ, ಅಲ್ಲಿಗೆ ನುಗ್ಗಿ ಹೊಡೆಯುತ್ತೇವೆ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಯನ್ನು ಖಂಡಿಸಿದ ಪಾಕಿಸ್ತಾನ, ತನ್ನ ಸಾರ್ವಭೌಮತ್ವವನ್ನು ಕಾಪಾಡಲು ಬದ್ಧ ಮತ್ತು ಸಾಮರ್ಥ್ಯದಲ್ಲಿ ತಾನು ದೃಢವಾಗಿ ನಿಂತಿರುವುದಾಗಿ ಪಾಕಿಸ್ತಾನ ಶನಿವಾರ ಹೇಳಿದೆ.

“ನಿನ್ನೆ ಟಿವಿ ಸಂದರ್ಶನವೊಂದರಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೀಡಿದ ಪ್ರಚೋದನಕಾರಿ ಹೇಳಿಕೆಯನ್ನು ಪಾಕಿಸ್ತಾನ ಖಂಡಿಸುತ್ತದೆ. ಜನವರಿ 25, 2024 ರಂದು ಪಾಕಿಸ್ತಾನವು ಭಾರತದ ಕಾನೂನುಬಾಹಿರ ಹತ್ಯೆಗಳ ಬಗ್ಗೆ ಮಾತನಾಡಿದೆ ”ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವುದೇ ಆಕ್ರಮಣದ ವಿರುದ್ಧ ತನ್ನ ಸಾರ್ವಭೌಮತ್ವವನ್ನು ಕಾಪಾಡಲು ಬದ್ಧ ಮತ್ತು ಸಾಮರ್ಥ್ಯದಲ್ಲಿ ತಾನು ದೃಢವಾಗಿ ನಿಲ್ಲುವುದಾಗಿ ಪಾಕಿಸ್ತಾನ ಹೇಳಿದೆ.

2019 ರ ನಂತರ ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ ನಡೆಸಿವೆ ಎಂದು ಬ್ರಿಟಿಷ್ ಪತ್ರಿಕೆ "ದಿ ಗಾರ್ಡಿಯನ್" ವರದಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವರು, "ನೆರೆಯ ದೇಶದ ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರೆ ಅಥವಾ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದರೆ ನಾವು ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ" ಎಂದು ಹೇಳಿದ್ದರು.

ಭಾರತ ಎಂದಿಗೂ ಯಾವುದೇ ದೇಶದ ಮೇಲೆ ದಾಳಿ ನಡೆಸಿಲ್ಲ ಅಥವಾ ಅವರ ಪ್ರದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿಲ್ಲ ಎಂದು ಸಿಂಗ್ ಪುನರುಚ್ಚರಿಸಿದರು. ಆದರೆ ಯಾರಾದರೂ ಭಾರತಕ್ಕೆ ಅಥವಾ ಅದರ ಶಾಂತಿಗೆ ಧಕ್ಕೆ ತಂದರೆ ಅವರನ್ನು ಬಿಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಪಾಕಿಸ್ತಾನದ ವಿದೇಶಾಂಗ ಕಚೇರಿ ಇಂದು ಬಿಡುಗಡೆ ಮಾಡಿರುವ ಹೇಳಿಕೆಗೆ ಭಾರತ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.