ವಿದೇಶ

Woman Gives Birth To 6 Babies: ಅಚ್ಚರಿಯಾದರೂ ಸತ್ಯ.. 1 ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ ಪಾಕ್ ಮಹಿಳೆ

ಮಹಿಳೆಯೊಬ್ಬಳು 1 ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆಯೊಂದು ಪಾಕಿಸ್ತಾನದಲ್ಲಿ ವರದಿಯಾಗಿದೆ.

Woman Gives Birth To 6 Babies: ಅಚ್ಚರಿಯಾದರೂ ಸತ್ಯ.. 1 ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ ಪಾಕ್ ಮಹಿಳೆ
6 ಮಕ್ಕಳಿಗೆ ಜನ್ಮ ನೀಡಿದ ಪಾಕ್ ಮಹಿಳೆ
Published On :

ರಾವಲ್ಪಿಂಡಿ: ಮಹಿಳೆಯೊಬ್ಬಳು 1 ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆಯೊಂದು ಪಾಕಿಸ್ತಾನದಲ್ಲಿ ವರದಿಯಾಗಿದೆ.

ಪಾಕಿಸ್ತಾನದ ರಾವಲ್ಪಿಂಡಿಯ ಹಾಜಿರಾ ಕಾಲೋನಿಯಲ್ಲಿ ನೆಲೆಸಿರುವ ಮೊಹಮ್ಮದ್ ವಹೀದ್ ಅವರ ಪತ್ನಿ ಜೀನತ್ ವಹೀದ್ ಎಂಬುವವರು 1 ಗಂಟೆ ಅವಧಿಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಗುರುವಾರ (ಏಪ್ರಿಲ್ 18)ರಂದು ಜೀನತ್ ವಹೀದ್ ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಜೀನತ್ ವಹೀದ್ 6 ಮಕ್ಕಳಿಗೆ ಮಕ್ಕಳಿಗೆ ಜನ್ಮ ನೀಡಿದ್ದು, ಈ ಪೈಕಿ 2 ಹೆಣ್ಣು ಮತ್ತು 4 ಗಂಡುಮಕ್ಕಳು ಎಂದು ತಿಳಿದುಬಂದಿದೆ.

ತಾಯಿ ಸೇರಿದಂತೆ ಎಲ್ಲಾ ಶಿಶುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ಮತ್ತು ಶಿಶುಗಳು ತಲಾ ಎರಡು ಪೌಂಡ್‌ಗಳಿಗಿಂತ ಕಡಿಮೆ ತೂಕವನ್ನು ಹೊಂದಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಶಿಶುಗಳನ್ನು ಇನ್ಕ್ಯುಬೇಟರ್‌ಗಳಲ್ಲಿ ಇರಿಸಲಾಗಿದ್ದು, ಮಕ್ಕಳಿಗೆ ಹಾಗೂ ತಾಯಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಶಿಶುಗಳನ್ನು ಹೆರಿಗೆ ಮಾಡಿದ ನಂತರ ಜೀನತ್‌ಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ ಎಂದು ವೈದ್ಯರು ಹೇಳಿದ್ದು, ಕೆಲವೇ ದಿನಗಳಲ್ಲಿ ಅವರು ಸಹಜ ಸ್ಥಿತಿಗೆ ಮರಳುತ್ತಾರೆ. ಇದು ಜೀನತ್‌ಗೆ ಮೊದಲ ಹೆರಿಗೆಯಾಗಿದ್ದು, ಆಸ್ಪತ್ರೆಯ ವೈದ್ಯರು ಆಸ್ಪತ್ರೆಯಲ್ಲಿ ಲಭ್ಯವಿರುವ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ.

ವೈದ್ಯರಿಗೂ ಅಚ್ಚರಿ

ಮಹಿಳೆಯೊಬ್ಬರು ಒಂದೇ ಹೆರಿಗೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿರುವುದು ಆಕೆಗೆ ಚಿಕಿತ್ಸೆ ನೀಡಿದ ವೈದ್ಯರು ಕೂಡ ಅಚ್ಚರಿ ವ್ಯಕ್ತಪಡಿಸಿದ್ದು, ಈ ಪವಾಡವನ್ನು ಕಂಡು ಆಸ್ಪತ್ರೆಯ ಸಿಬ್ಬಂದಿ ಅಚ್ಚರಿಯೊಂದಿಗೆ ಖುಷಿ ಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.