ವಿದೇಶ

ಲಂಡನ್‌ ಭಾರತೀಯ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿ ಪರ ದಾಳಿ ನಡೆಸಿದ್ದ ಪ್ರಮುಖ ಆರೋಪಿ ಬಂಧಿಸಿದ NIA

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಖಲಿಸ್ತಾನಿ ಪರ ದಾಳಿ ನಡೆಸಿದ್ದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆ. ಈ ಕುರಿತು ಎನ್‌ಐಎ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಲಂಡನ್‌ ಭಾರತೀಯ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿ ಪರ ದಾಳಿ ನಡೆಸಿದ್ದ ಪ್ರಮುಖ ಆರೋಪಿ ಬಂಧಿಸಿದ NIA
ಖಲಿಸ್ತಾನಿ ಪರ ದಾಳಿ
Published On :

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಖಲಿಸ್ತಾನಿ ಪರ ದಾಳಿ ನಡೆಸಿದ್ದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆ. ಈ ಕುರಿತು ಎನ್‌ಐಎ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಎನ್‌ಐಎಗೆ ದೊಡ್ಡ ಗೆಲುವು ಸಿಕ್ಕಿದೆ. ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಮೇಲಿನ ಹಿಂಸಾತ್ಮಕ ದಾಳಿ ಮತ್ತು ನಂತರದ ಪ್ರತಿಭಟನೆಯ ಸಮಯದಲ್ಲಿ ಕಾನೂನುಬಾಹಿರ ಕ್ರಮಗಳಿಗೆ ಸಂಬಂಧಿಸಿದ 2023ರ ಪ್ರಕರಣದ ಪ್ರಮುಖ ಆರೋಪಿಯನ್ನು ಗುರುವಾರ ಬಂಧಿಸಿದೆ ಎಂದು ಎನ್‌ಐಎ ತಿಳಿಸಿದೆ.

2023ರ ಮಾರ್ಚ 22ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಕ್ಕಾಗಿ ಯುಕೆಯ ಹೌನ್ಸ್ಲೋ ನಿವಾಸಿ ಇಂದರ್ಪಾಲ್ ಸಿಂಗ್ ಗಾಬಾನನ್ನು ಬಂಧಿಸಲಾಗಿದೆ. ಕಳೆದ ವರ್ಷ ಮಾರ್ಚ್ 19 ಮತ್ತು ಮಾರ್ಚ್ 22ರಂದು ಲಂಡನ್‌ನಲ್ಲಿ ನಡೆದ ಘಟನೆಗಳು ಭಾರತೀಯ ಮಿಷನ್‌ಗಳು ಮತ್ತು ಅದರ ಅಧಿಕಾರಿಗಳ ಮೇಲೆ ದಾಳಿ ಮಾಡುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಈ ಪ್ರಕರಣದಲ್ಲಿ ಎನ್‌ಐಎ ನಡೆಸಿದ ತನಿಖೆಯಿಂದ ತಿಳಿದುಬಂದಿದೆ.

ಖಲಿಸ್ತಾನಿ ಪರ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಕೈಗೊಂಡ ಕ್ರಮಕ್ಕೆ ಪ್ರತೀಕಾರವಾಗಿ ಹೈಕಮಿಷನ್ ಮೇಲೆ ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.