ವಿದೇಶ

ಲಂಡನ್‌ ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ: 13 ವರ್ಷದ ಬಾಲಕ ಸಾವು; ವ್ಯಕ್ತಿ ಬಂಧನ

ಪೂರ್ವ ಲಂಡನ್‌ನ ಹೈನಾಲ್ಟ್‌ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಲಂಡನ್‌ ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ: 13 ವರ್ಷದ ಬಾಲಕ ಸಾವು; ವ್ಯಕ್ತಿ ಬಂಧನ
ಲಂಡನ್ ಪೊಲೀಸರು
Published On :

ಲಂಡನ್: ಪೂರ್ವ ಲಂಡನ್‌ನ ಹೈನಾಲ್ಟ್‌ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವ್ಯಕ್ತಿಯೊಬ್ಬ ಜನ ನಿಬಿಡ ರಸ್ತೆಗಳಲ್ಲಿ ತನ್ನ ಎದುರಿಗೆ ಬಂದ ಎಲ್ಲರ ಮೇಲೂ ಮನ ಬಂದಂತೆ ಕತ್ತಿ ಬೀಸುತ್ತಿದ್ದ. ಸಿಕ್ಕ ಸಿಕ್ಕವರ ಮೇಲೆ ಏಕಾಏಕಿ ಕತ್ತಿ ಬೀಸಿದ ಪರಿಣಾಮ 13 ವರ್ಷದ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿದ ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

"ಕೈಯಲ್ಲಿ ಕತ್ತಿ(ಲಾಂಗ್) ಹಿಡಿದಿದ್ದ ವ್ಯಕ್ತಿ ಇತರ ಸಾರ್ವಜನಿಕರ ಮೇಲೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾನೆ ಎಂದು" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

"ನಾವು ಗಾಯಗೊಂಡವರ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ." ಲಂಡನ್ ಆಂಬ್ಯುಲೆನ್ಸ್ ಸೇವೆ, ಐದು ಜನರಿಗೆ ಚಿಕಿತ್ಸೆ ನೀಡಿದೆ ಮತ್ತು ಅವರೆಲ್ಲರನ್ನು ಆಸ್ಪತ್ರೆಗೆ ಕರೆದೊಯ್ದಿದೆ ಎಂದು ಪೊಲೀಸರು ಹೇಳಿದ್ದಾರೆ.

ಲಂಡನ್‌ನ ಸ್ಥಳೀಯ ಕಾಲಮಾನ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಬೆಳಗಿನ ಹೊತ್ತು ಕಚೇರಿಗೆ ತೆರಳುವ ಒತ್ತಡದಲ್ಲಿದ್ದ ಜನರಿಗೆ ಈ ಘಟನೆ ಆಘಾತ ತಂದಿತ್ತು. ಕೂಡಲೇ ಪೊಲೀಸರಿಗೆ ಕರೆ ಮಾಡಿದ ಸಾರ್ವಜನಿಕರು ವ್ಯಕ್ತಿಯೊಬ್ಬ ತನ್ನ ಕೈಯಲ್ಲಿ ಕತ್ತಿ ಹಿಡಿದು ಎಲ್ಲರ ಮೇಲೂ ಮನಬಂದಂತೆ ಬೀಸುತ್ತಿದ್ದಾನೆ ಎಂದು ಹೇಳಿದ್ದಾರೆ. ಕೂಡಲೇ ಪೊಲೀಸರು ಕಾರ್ಯ ಪ್ರವೃತ್ತರಾಗಿ, ವ್ಯಕ್ತಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.