ವಿದೇಶ

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹಸೀನಾ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ, 24 ಮಂದಿ ಸಾವು

ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ 'ಅಸಹಕಾರ ಕಾರ್ಯಕ್ರಮ'ದಲ್ಲಿ ಭಾಗವಹಿಸಲು ಪ್ರತಿಭಟನಾಕಾರರು ಬಂದಿದ್ದರು. ಅವಾಮಿ ಲೀಗ್, ಛಾತ್ರ ಲೀಗ್ ಮತ್ತು ಜುಬೋ ಲೀಗ್‌ನ ಕಾರ್ಯಕರ್ತರು ಇದನ್ನು ವಿರೋಧಿಸಿದರು. ನಂತರ ಎರಡು ಕಡೆಯ ನಡುವೆ ಘರ್ಷಣೆ ನಡೆಯಿತು.

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹಸೀನಾ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ, 24 ಮಂದಿ ಸಾವು
ಬಾಂಗ್ಲಾದೇಶ ಹಿಂಸಾಚಾರ
Published On :

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರು ಮತ್ತು ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ನಡುವೆ ಇಂದು ನಡೆದ ಘರ್ಷಣೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು ಹತ್ತಾರು ಮಂದಿ ಗಾಯಗೊಂಡಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ 'ಅಸಹಕಾರ ಕಾರ್ಯಕ್ರಮ'ದಲ್ಲಿ ಭಾಗವಹಿಸಲು ಪ್ರತಿಭಟನಾಕಾರರು ಬಂದಿದ್ದರು. ಅವಾಮಿ ಲೀಗ್, ಛಾತ್ರ ಲೀಗ್ ಮತ್ತು ಜುಬೋ ಲೀಗ್‌ನ ಕಾರ್ಯಕರ್ತರು ಇದನ್ನು ವಿರೋಧಿಸಿದರು. ನಂತರ ಎರಡು ಕಡೆಯ ನಡುವೆ ಘರ್ಷಣೆ ನಡೆಯಿತು.

ಮುನ್ಷಿಗಂಜ್‌ನಲ್ಲಿ ಪ್ರತಿಭಟನಾಕಾರರು ಮತ್ತು ಅವಾಮಿ ಲೀಗ್ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ 24 ಮಂದಿ ಸಾವನ್ನಪ್ಪಿದ್ದು 30 ಮಂದಿ ಗಾಯಗೊಂಡಿದ್ದಾರೆ ಎಂದು 'ಢಾಕಾ ಟ್ರಿಬ್ಯೂನ್' ಪತ್ರಿಕೆ ವರದಿ ಮಾಡಿದೆ.

ಪ್ರತಿಭಟನಾಕಾರರು ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿದ್ದು ಅಲ್ಲದೆ ಮೀಸಲಾತಿ ಸುಧಾರಣೆಗಳ ಕುರಿತು ಇತ್ತೀಚಿನ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದವರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಧ್ವನಿ ಎತ್ತಿದರು. ಅಸಹಕಾರ ಚಳವಳಿಯ ಮೊದಲ ದಿನ ರಾಜಧಾನಿಯ ಸೈನ್ಸ್ ಲ್ಯಾಬ್ ಛೇದಕದಲ್ಲೂ ಪ್ರತಿಭಟನಾಕಾರರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸೈನ್ಸ್ ಲ್ಯಾಬ್, ಧನ್ಮಂಡಿ, ಮೊಹಮ್ಮದ್‌ಪುರ, ಟೆಕ್ನಿಕಲ್, ಮೀರ್‌ಪುರ-10, ರಾಂಪುರ, ತೇಜಗಾಂವ್, ಫಾರ್ಮ್‌ಗೇಟ್, ಪಂಥ್‌ಪತ್, ಜತ್ರಾಬರಿ ಮತ್ತು ಢಾಕಾದ ಉತ್ತರಾದಲ್ಲಿಯೂ ಪ್ರಾತ್ಯಕ್ಷಿಕೆ ಮತ್ತು ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಪ್ರತಿಭಟನೆಯ ಸಂಘಟಕರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ನೂರಾರು ಮಂದಿ ಗಾಯಗೊಂಡಿದ್ದರು. ನಂತರ ಅಲ್ಲಿನ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಬಳಿಕ ಪರಿಸ್ಥಿತಿ ತಿಳಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.