ಬಾಂಗ್ಲಾದೇಶ: ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸೈಯದ್ ರೆಫಾತ್ ಅಹ್ಮದ್ ಪ್ರಮಾಣ ವಚನ ಸ್ವೀಕಾರ
ಅಧ್ಯಕ್ಷ ಶಹಾಬುದ್ದೀನ್ ಶನಿವಾರ ನ್ಯಾಯಮೂರ್ತಿ ಅಹ್ಮದ್ ಅವರನ್ನು ಬಾಂಗ್ಲಾದೇಶದ 25 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ.

ಢಾಕಾ: ಬಾಂಗ್ಲಾದೇಶದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸೈಯದ್ ರೆಫಾತ್ ಅಹ್ಮದ್ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ನ್ಯಾಯಾಂಗ ವ್ಯವಸ್ಥೆಯಲ್ಲೂ ಬದಲಾವಣೆಗೆ ಪ್ರತಿಭಟನಾಕಾರರು ಒತ್ತಾಯಿಸಿದ ನಂತರ ಒಬೈದುಲ್ ಹಸನ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಒಂದು ದಿನದ ದಿನದ ನಂತರ ಸೈಯದ್ ರೆಫಾತ್ ಅಹ್ಮದ್ ದೇಶದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮುಖ್ಯ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಸಂಪುಟ ಕಾರ್ಯದರ್ಶಿ ಮಹೆಬೂಬ್ ಹೊಸೈನ್ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಡೆಸಿಕೊಟ್ಟರು ಎಂದು ವರದಿ ತಿಳಿಸಿದೆ. ಶೇಕ್ ಹಸೀನಾ ಪದಚ್ಯುತಿ ನಂತರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಪ್ರೊ.ಮುಹಮ್ಮದ್ ಯೂನಸ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಅಧ್ಯಕ್ಷ ಶಹಾಬುದ್ದೀನ್ ಶನಿವಾರ ನ್ಯಾಯಮೂರ್ತಿ ಅಹ್ಮದ್ ಅವರನ್ನು ಬಾಂಗ್ಲಾದೇಶದ 25 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಇತರ ಪ್ರತಿಭಟನಾಕಾರರ ಹೊಸ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಡಾ ಮಕ್ಸುದ್ ಕಮಾಲ್ ಮತ್ತು ಬಾಂಗ್ಲಾ ಅಕಾಡೆಮಿ ಮಹಾನಿರ್ದೇಶಕ ಪ್ರೊಫೆಸರ್ ಡಾ ಎಂಡಿ ಹರುನ್-ಉರ್-ರಶೀದ್ ಅಸ್ಕಾರಿ ಸೇರಿದಂತೆ ಬಾಂಗ್ಲಾದೇಶದ ಹಲವಾರು ಉನ್ನತ ಅಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



